ಸೋಮವಾರಪೇಟೆ, ನ. 25: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವತಿಯಿಂದ ತಾ. 27 ರಂದು ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ 62ನೇ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಿಗ್ಗೆ 9.30 ಗಂಟೆಗೆ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಪಿ. ಕುಶಾಲ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಉದ್ಘಾಟಿಸಲಿದ್ದು, ಶಾಲೆಯ ಪದವೀಧರ ಮುಖ್ಯೋಪಾ ಧ್ಯಾಯಿನಿ ಎಂ.ಜೆ. ಅಣ್ಣಮ್ಮ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮಾಲತಿ ಎಸ್. ನಾಯಕ, ಹಿರಿಯ ಕವಿ ನ.ಲ. ವಿಜಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯವಸ್ಥಾಪಕ ಹೆಚ್.ಎಸ್. ಉತ್ತೇಶ್ ಪಾಲ್ಗೊಳ್ಳಲಿದ್ದಾರೆ.

ಅಂದು ಅಪರಾಹ್ನ 2 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕ.ಸಾ.ಪ. ತಾಲೂಕು ಮಾಜಿ ಅಧ್ಯಕ್ಷ ಭಾರಧ್ವಜ್ ಮುಖ್ಯ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್, ಬಿಆರ್‍ಪಿಗಳಾದ ಸಿ.ಆರ್. ಶಶಿಧರ್, ಬಿ. ವಿಜಯಕುಮಾರ್, ಸಿಆರ್‍ಪಿ ಗಳಾದ ಹೆಚ್.ಕೆ. ಜವರಯ್ಯ, ಅಶೋಕ್ ಕುಮಾರ್, ಡಿ.ಎಂ. ಚಿನ್ನಪ್ಪ, ಎಸ್.ಆರ್. ಶಿವಲಿಂಗ ಪಾಲ್ಗೊಳ್ಳಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್‍ನ ತಾಲೂಕು ಮಾಜಿ ಅಧ್ಯಕ್ಷ ಎಸ್.ಸಿ. ರಾಜಶೇಖರ್ ಅವರನ್ನು ಕಾರ್ಯ ಕ್ರಮದಲ್ಲಿ ಸನ್ಮಾನಿಸ ಲಾಗುವದು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧಾ ವಿಜೇತರುಗಳಿಗೆ ಬಹುಮಾನ ವಿತರಣೆ ನಡೆಯಲಿದೆ.