ಮಡಿಕೇರಿ, ನ. 28: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಎಸ್‍ವಿಜೀಸ್ ವಿಶ್ವಪ್ರಜ್ಞ ಸಂಯುಕ್ತ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಿನ್ನೆ 'ಪ್ರತಿಬಿಂಬ 2017' ಕಾಲೇಜು ವಾರ್ಷಿ ಕೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಂಗಭೂಮಿ ತಜ್ಞ, ನಟ, ನಿರ್ದೇಶಕ ಮಂಡ್ಯ ರಮೇಶ್ ಹಾಗೂ ಕೊಡಗಿನ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಕಾರ್ಯಕ್ರಮ ವನ್ನು ಜ್ಯೋತಿ ಬೆಳಗಿಸು ವದರ ಮೂಲಕ ಉದ್ಘಾಟಿಸಿದರು. ಬಳಿಕ ಅನಂತಶಯನ ಮಾತನಾಡಿ, ಇಂದು ದೇಶದ ಸಂವಿಧಾನವೇ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ. ಹಣ, ಅಧಿಕಾರಕ್ಕಾಗಿ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಮುಂದೆ ಈ ರಾಜ್ಯ, ದೇಶವನ್ನು ಆಳುವಂತಾಗಬೇಕು ಎಂದರು.

ಎಲ್ಲಾ ಕಡೆಗಳಲ್ಲೂ ಕನ್ನಡವನ್ನು ಹೆಚ್ಚಾಗಿ ಬಳಸಿ, ಮಕ್ಕಳಿಗೆ ಕನ್ನಡವನ್ನು ಕಲಿಸದಿದ್ದರೆ, ಕನ್ನಡವನ್ನು ಪ್ರೀತಿಸದಿದ್ದರೆ, ನಮ್ಮ ನೆಲಕ್ಕೆ ಕನ್ನಡದ ಸೊಬಗನ್ನು ತರದಿದ್ದರೆ, ಮಕ್ಕಳಿಗೆ ಅನಿವಾರ್ಯವಾಗಿ ಅಪ್ಪ, ಅಮ್ಮ, ಚಿಕ್ಕಪ್ಪ, ಚಿಕ್ಕಮ್ಮ ಎಂಬ ಪದಗುಚ್ಛಗಳನ್ನು ಹೇಳಿಕೊಡದಿದ್ದರೆ, ಯಾವ ಸಂಸ್ಕøತಿಯನ್ನು ಉಳಿಸಲು ಸಾಧ್ಯವಾಗುವದಿಲ್ಲ ಎಂದು ಹೇಳಿದರು.

ವಾರ್ಷಿಕೋತ್ಸವದÀ ಅಂಗವಾಗಿ ನಡೆಸಿದ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಿ ಅಭಿನಂದಿಸಲಾ ಯಿತು. ಗೌರವಾನ್ವಿತ ಅತಿಥಿಗಳಾಗಿ ಮೈಸೂರು ವಿಶ್ವದ್ಯಾನಿಲಯದ ಕುಲಪತಿ ಪ್ರೊ. ಸಿ. ಬಸವರಾಜು, ವಿಶ್ವಪ್ರಜ್ಞ ಸಮಾಜ ಮತ್ತು ಶೈಕ್ಷಣಿಕ ಸಂಸ್ಥೆಯ ಅಧ್ಯಕ್ಷ ಸುರೇಶ್ ಬಾಬು, ವಿಶ್ವಪ್ರಜ್ಞ ವಸತಿ ಸಹಕಾರ ಸಂಘದ ಅಧ್ಯಕ್ಷ ವೈ.ಎನ್. ಶಂಕರೇಗೌಡ ಆಗಮಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕ ವಿಶ್ವನಾಥ್ ಶೇಷಾಚಲ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ರಚನ್ ಅಪ್ಪಣಮಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.