ಸಿದ್ದಾಪುರ, ನ. 28: ದೇಶ ಅಭಿವೃದ್ಧಿ ಆಗಬೇಕಾದರೆ ಶಿಕ್ಷಣ ಅತ್ಯವಶ್ಯಕ ಎಂದು ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಕರಡಿಗೋಡು ಸರಕಾರಿ ಶಾಲೆಯ ವಜ್ರಮಹೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅವರು ಸರ್ಕಾರಗಳು ಶಿಕ್ಷಣಕ್ಕಾಗಿ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು, ಈ ಹಿನ್ನೆಲೆ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡಿದ ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎ. ಲೋಕೇಶ್ ದಾನಿಗಳ ನೆರವಿನಿಂದ ಪ್ರಾರಂಭಿಸಿದ ಕರಡಿಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು 60 ವರ್ಷ ಪೂರೈಸಿ ಇದೀಗ ಖಾಸಗಿ ಶಾಲೆ ಗಳಿಗಿಂತ ಹೆಚ್ಚಿನ ಸೌಲಭ್ಯ ಹೊಂದಿ ಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಜ್ರ ಮಹೋತ್ಸವ ಆಚರಣೆ ಸಮಿತಿಯ ಅಧ್ಯಕ್ಷ ಕೆ.ಡಿ. ನಾಣಯ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯನ್ನು ದತ್ತು ಸ್ವೀಕರಿಸಿದ ಇವಾಲ್ವ್ ಬ್ಯಾಕ್ ರೆಸಾರ್ಟ್‍ನ ವ್ಯವಸ್ಥಾಪಕಿ ಕಾಂತಿ ಅನೀಶ್, ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಶಾಲೆಯ ಪ್ರಥಮ ಶಿಕ್ಷಕಿ ಲೇಸಮ್ಮ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು, ಸಮಾಜ ಸೇವಕರಾದ ಜೋಸೆಫ್ ಶ್ಯಾಮ್, ಊರಿನ ಪ್ರಮುಖರಾದ ಚಾರಿಮಂಡ ತಮ್ಮಯ್ಯ, ನಿವೃತ ಕಮಾಂಡರ್ ಕಂಬೀರಂಡ ದೇವಯ್ಯ, ಕೆ.ಪಿ. ಗಣಪತಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರು, ಡಾ. ಜೀವನ್ ಮತ್ತಿತರರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು, ದಾನಿಗಳನ್ನು ಹಾಗೂ ಹಳೆ ವಿದ್ಯಾರ್ಥಿಗಳನ್ನು ಸನ್ಮಾಸಲಾಯಿತು.

ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯ ಕ್ರಮಗಳು ನಡೆದವು ಬಳಿಕ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರಿಗೂ ಭೋಜನ ವ್ಯವಸ್ಥೆ ಕಲ್ಪಿಸಲಾಗಿತ್ತು. ಊರಿನಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮ ಹಬ್ಬದ ವಾತಾವರಣವನ್ನು ಸೃಷ್ಟಿಸಿತ್ತು.

ಶಾಲಾ ಮುಖ್ಯ ಶಿಕ್ಷಕಿ ಕೆ,ಎಸ್ ಮೋಳಿ ಶಾಲಾ ವರದಿ ವಾಚಿಸಿ, ಸ್ವಾಗತಿಸಿದರು. ಶಾಲಾ ಶಿಕ್ಷಕಿ ರುಕ್ಮಣಿ ಹಾಗೂ ಅಶ್ರಫ್ ರವರು ಕಾರ್ಯಕ್ರಮ ನಿರೂಪಿಸಿದರು.

- ಎ.ಎನ್. ವಾಸು