ಮಡಿಕೇರಿ. ನ.28 :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಮೈಸೂರು ವಿಭಾಗದ ವತಿಯಿಂದ ಇದೇ ತಾ. 30 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಡಿಸಿಸಿ ಕಚೇರಿ ಮೈದಾನದಲ್ಲಿ ಮೈಸೂರು ವಲಯ ಮಟ್ಟದ ಬೃಹತ್ ಐಕ್ಯತಾ ಸಮಾವೇಶ ನಡೆಯಲಿದ್ದು, ಕೊಡಗು ಜಿಲ್ಲೆಯ ಸಾವಿರಾರು ಕಾರ್ಯಕರ್ತರು ಸಾಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ವೈ.ಸಯೀದ್ ಅಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಸೇರಿದಂತೆ ಜನಪ್ರತಿ ನಿಧಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆಂದು ಮಾಹಿತಿ ನೀಡಿದರು.