ಸೋಮವಾರಪೇಟೆ, ನ. 28: ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ ಅವರ ತಂದೆ ಎಸ್.ಎ. ಗಣಪತಿ (87) ಅವರು ತಾ. 28ರಂದು ಮುಂಜಾನೆ ನಿಧನರಾದರು.

ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಇಂದು ಮುಂಜಾನೆ ಕೊನೆಯುಸಿರೆಳೆದರು. ಮೃತರು ಎಸ್.ಜಿ. ಮೇದಪ್ಪ ಸೇರಿದಂತೆ ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ಸೇರಿದಂತೆ ಇತರ ಪ್ರಮುಖರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.