ಶ್ರೀಮಂಗಲ, ಡಿ. 14: ಪೊನ್ನಂಪೇಟೆ ತಾಲೂಕು ಪುನರ್ ರಚನೆಗೆ ಆಗ್ರಹಿಸಿ 44ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹದಲ್ಲಿ ಜಿಲ್ಲಾ ಅಂಗನವಾಡಿ ನೌಕರರ ಸಂಘ, ಪೊನ್ನಂಪೇಟೆ ಮಾಜಿ ಸೈನಿಕರ ಸಂಘ, ಗೋಣಿಕೊಪ್ಪ ಕೊಡವ ಸಮಾಜ, ಪೊನ್ನಂಪೇಟೆ ತಾಲೂಕು ಹೋರಾಟ ಸಮಿತಿ, ಜಿಲ್ಲಾ ಸಾರ್ವಜನಿಕರ ಹಿತರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಯ ಪ್ರಮುಖರು ಸೇರಿ ಭಾಗವಹಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.

ಈ ಸಂಧರ್ಭ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚೇಂದೀರ ಕಾವೇರಮ್ಮ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಚೊಟ್ಟೇಕ್‍ಮಾಡ ರಾಜೀವ್ ಬೋಪಯ್ಯ , ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಅರಮಣಮಾಡ ಸತೀಶ್ ದೇವಯ್ಯ ಮಾತನಾಡಿದರು.

ಪ್ರತಿಭಟನೆಯಲ್ಲಿ ಅಂಗನವಾಡಿ ಶಿಕ್ಷಕರ ಸಂಘದ ತಾಲೂಕು ಕ್ಷೇಮನಿಧಿ ಅಧ್ಯಕ್ಷೆ ಬಿ.ಕೆ. ಸರೋಜ, ಪದಾಧಿಕಾರಿಗಳಾದ ಲತಾ, ಮೀನಾ ಕುಮಾರಿ, ಸರಸ್ವತಿ, ಪೊನ್ನಂಪೇಟೆಯ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಐನಂಡ ಸುಬ್ರಮಣಿ, ಪೊನ್ನಂಪೇಟೆ ಕೊಡವ ಸಮಾಜದ ನಿರ್ದೇಶಕ ಮಲ್ಲಮಾಡ ಪ್ರಭು ಪೂಣಚ್ಚ, ತಾಲೂಕು ಹೋರಾಟ ಸಮಿತಿಯ ಸಂಚಾಲಕ ಎಂ.ಎಂ. ರವೀಂದ್ರ, ಪೊನ್ನಂಪೇಟೆ ಹಿರಿಯ ವೇದಿಕೆಯ ಅಧ್ಯಕ್ಷ ಪೊಕ್ಕಳಿಚಂಡ ಪೂಣಚ್ಚ, ಹಿರಿಯರಾದ ಕಾಟಿಮಾಡ ಜಿಮ್ಮಿ ಅಯ್ಯಣ್ಣ, ಮಾಚಿಮಾಡ ಕುಶ, ಕೋಟೇರ ಕಿಶನ್, ವಕೀಲರಾದ ಮತ್ರಂಡ ಅಪ್ಪಚ್ಚು, ಕೋಳೇರ ದಯಾ ಚಂಗಪ್ಪ, ಹಿರಿಯಮಾಡ ಬೆಳ್ಯಪ್ಪ, ಪುಚ್ಚಿಮಾಡ ಹರೀಶ್, ಮದ್ರೀರ ಮುತ್ತಪ್ಪ, ಇಟ್ಟೀರ ಲಾಲಪ್ಪ, ಗೋಣಿಕೊಪ್ಪ ಕೊಡವ ಸಮಾಜದ ಕಾರ್ಯದರ್ಶಿ ಚೊಟ್ಟೆಯಂಡಮಾಡ ಮಾದಪ್ಪ ಹಾಗೂ ಚೊಟ್ಟೆಯಂಡಮಾಡ ಅರುಣ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷ ಮೂಕಳೇರ ಸುಮಿತಾ, ಅಂತರರಾಷ್ಟ್ರೀಯ ಓಟಗಾರ ಪೆಮ್ಮಂಡ ಅಪ್ಪಯ್ಯ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.