ಮಡಿಕೇರಿ, ಡಿ. 14: ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಮಂಗಳೂರು ವಿಶ್ವ ವಿದ್ಯಾನಿಲಯದ ವತಿಯಿಂದ ಕೊಡಗು ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ‘ಕರ್ನಾಟಕ 2025-ನನ್ನ ದೂರದೃಷ್ಟಿ’ (ಏಂಖಓಂಖಿಂಏಂ Iಓ 2025-ಒಙ ಗಿISIಔಓ) ಎಂಬ ವಿಷಯದ ಕುರಿತು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ತಾ. 19 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಕಾಲೇಜಿನಿಂದ ಇಬ್ಬರು ಆಸಕ್ತ ವಿದ್ಯಾರ್ಥಿಗಳನ್ನು (ಕನ್ನಡ ಮತ್ತು ಆಂಗ್ಲ ಭಾಷೆಗೆ ತಲಾ ಒಬ್ಬರಂತೆ) ಕಳುಹಿಸಿಕೊಡುವಂತೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮ ಸಂಯೋಜಕ ಇತಿಹಾಸ ವಿಭಾಗದ ಮುಖ್ಯಸ್ಥ ಮೇಜರ್ ರಾಘವ ಬಿ. (ಮೊಬೈಲ್ ನಂ. 9448721205 ಜesiಡಿe.ಛಿಡಿb@gmಚಿiಟ.ಛಿom) ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಭಾಗವಹಿಸುವ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ಮತ್ತು ಲಘು ಉಪಹಾರವನ್ನು ನೀಡಲಾಗುವದು ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ.