ಮಡಿಕೇರಿ, ಡಿ. 14: ಮಡಿಕೇರಿ ಹಾಗೂ ಅಮ್ಮತ್ತಿ ಕೊಡವ ಸಮಾಜದ ವತಿಯಿಂದ ಆಯಾ ಸಮಾಜದ ಪುತ್ತರಿ ಊರೊರ್ಮೆ ಕಾರ್ಯಕ್ರಮ ತಾ. 17ರಂದು ಮಡಿಕೇರಿ ಹಾಗೂ ಅಮ್ಮತ್ತಿಯಲ್ಲಿ ನಡೆಯಲಿದೆ.ಮಡಿಕೇರಿ ಕೊಡವ ಸಮಾಜದಲ್ಲಿ ತಾ. 17ರಂದು ಬೆಳಿಗ್ಗೆ 10.30ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸಮಾಜದ ಅಧ್ಯಕ್ಷ ಕೊಂಗಾಂಡ ಎಸ್. ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ ಅವರು ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 2.30ಕ್ಕೆ ಸಾಂಪ್ರದಾಯಿಕ ಧಿರಿಸಿನಲ್ಲಿ ಕೊಡವ ಸಮಾಜದಿಂದ ಮ್ಯಾನ್ಸ್ ಕಾಂಪೌಂಡ್‍ನಲ್ಲಿರುವ ಮಂದ್‍ಗೆ ಮೆರವಣಿಗೆ ನಡೆಯಲಿದ್ದು, ಬಳಿಕ ಅಲ್ಲಿ ಮಡಿಕೇರಿ, ಡಿ. 14: ಮಡಿಕೇರಿ ಹಾಗೂ ಅಮ್ಮತ್ತಿ ಕೊಡವ ಸಮಾಜದ ವತಿಯಿಂದ ಆಯಾ ಸಮಾಜದ ಪುತ್ತರಿ ಊರೊರ್ಮೆ ಕಾರ್ಯಕ್ರಮ ತಾ. 17ರಂದು ಮಡಿಕೇರಿ ಹಾಗೂ ಅಮ್ಮತ್ತಿಯಲ್ಲಿ ನಡೆಯಲಿದೆ.

ಮಡಿಕೇರಿ ಕೊಡವ ಸಮಾಜದಲ್ಲಿ ತಾ. 17ರಂದು ಬೆಳಿಗ್ಗೆ 10.30ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸಮಾಜದ ಅಧ್ಯಕ್ಷ ಕೊಂಗಾಂಡ ಎಸ್. ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ ಅವರು ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 2.30ಕ್ಕೆ ಸಾಂಪ್ರದಾಯಿಕ ಧಿರಿಸಿನಲ್ಲಿ ಕೊಡವ ಸಮಾಜದಿಂದ ಮ್ಯಾನ್ಸ್ ಕಾಂಪೌಂಡ್‍ನಲ್ಲಿರುವ ಮಂದ್‍ಗೆ ಮೆರವಣಿಗೆ ನಡೆಯಲಿದ್ದು, ಬಳಿಕ ಅಲ್ಲಿ ಕಾರ್ಯಕ್ರಮ ಜರುಗಲಿದೆ.

ದೇಚೂರು ಕೊಡವಕೇರಿ

ಮಡಿಕೇರಿಯ ದೇಚೂರು ಕೊಡವಕೇರಿ ಸಂಘದಿಂದ ಡಿಸೆಂಬರ್ 29ರಂದು ಪುತ್ತರಿ ಓರ್ಮೆ ಕಾರ್ಯಕ್ರಮ ಮಡಿಕೇರಿ ಕೊಡವ ಸಮಾಜದಲ್ಲಿ ಸಂಘದ ಅಧ್ಯಕ್ಷ ಮಾದೆಯಂಡ ರವಿ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9ರಿಂದ ಕಾವೇರಿ ಮಾತೆಯ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಬಳಿಕ ವಿವಿಧ ಕ್ರೀಡಾಸ್ಪರ್ಧೆ, ಸಭಾ ಕಾರ್ಯಕ್ರಮ ಜರುಗಲಿದೆ. ಅತಿಥಿಗಳಾಗಿ ಎಂ.ಎಲ್.ಸಿ. ಸುನಿಲ್ ಸುಬ್ರಮಣಿ ಹಾಗೂ ವೃತ್ತ ನಿರೀಕ್ಷಕ ಪೆಮ್ಮಚಂಡ ಅನೂಪ್ ಮಾದಪ್ಪ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 2.30ರಿಂದ ಕೋಲಾಟ್, ಬೊಳಕಾಟ್, ಉಮ್ಮತ್ತಾಟ್, ಕೊಡವ ಹಾಡು ಸ್ಪರ್ಧೆ ನಡೆಯಲಿದೆ.