ಮಡಿಕೇರಿ, ಡಿ. 14: ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತಾ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸುವದಾಗಿ ತಿಳಿಸಿರುವ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಪಿಎಫ್‍ಐ ಸಂಘಟನೆಯ ವಿರುದ್ಧ ಗಂಭೀರ ಆರೋಪಗಳಿದ್ದರೂ ಯಾವದೇ ಕ್ರಮ ಕೈಗೊಳ್ಳದಿರುವದನ್ನು ಗಮನಿಸಿದರೆ, ರಾಜ್ಯದಲ್ಲಿ ಸರಕಾರಿ ಪ್ರಾಯೋಜಕತ್ವದ ಹತ್ಯೆಗಳು ನಡೆಯುತ್ತಿವೆ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಪ್ತಚರ ಇಲಾಖೆಯ ಮೂಲಕ ಸಮಾಜಘಾತುಕ ಶಕ್ತಿಗಳನ್ನು ಪತ್ತೆ ಹಚ್ಚಿ ಬಂಧಿಸಲು ಸರಕಾರ ಮುಂದಾಗಬೇಕೆಂದು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ಹೋದಲ್ಲೆಲ್ಲ ಅಶಾಂತಿಯ ವಾತಾವರಣ ಮೂಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಸುಮಾರು 20ಕ್ಕೂ ಅಧಿಕ ಮಂದಿ ಹಿಂದೂಗಳ ಕೊಲೆಯಾಗಿದೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿಕೊಳ್ಳುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯ ಸಂದರ್ಭ ಕಾರ್ಯ ಕರ್ತರಲ್ಲಿ ಭೀತಿಯ ವಾತಾವರಣವನ್ನು ಮೂಡಿಸಿ ರಾಜಕೀಯ ಲಾಭ ಪಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಇತ್ತೀಚೆಗೆ ಉತ್ತರ ಕನ್ನಡದಲ್ಲಿ ನಡೆದ ಅಶಾಂತಿಯ ವಾತಾವರಣಕ್ಕೆ ಸಂಬಂಧಿಸಿದಂತೆ ಕುಮ್ಮಕ್ಕು ನೀಡಿದ ಮೂಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಸುಮಾರು 20ಕ್ಕೂ ಅಧಿಕ ಮಂದಿ ಹಿಂದೂಗಳ ಕೊಲೆಯಾಗಿದೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿಕೊಳ್ಳುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯ ಸಂದರ್ಭ ಕಾರ್ಯ ಕರ್ತರಲ್ಲಿ ಭೀತಿಯ ವಾತಾವರಣವನ್ನು ಮೂಡಿಸಿ ರಾಜಕೀಯ ಲಾಭ ಪಡೆಯಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಇತ್ತೀಚೆಗೆ ಉತ್ತರ ಕನ್ನಡದಲ್ಲಿ ನಡೆದ ಅಶಾಂತಿಯ ವಾತಾವರಣಕ್ಕೆ ಸಂಬಂಧಿಸಿದಂತೆ ಕುಮ್ಮಕ್ಕು ನೀಡಿದ ಒತ್ತಾಯಿಸಿದರು.

ಮೃತ ಪರೇಶ್ ಮೇಸ್ತಾ ಕುಟುಂಬಕ್ಕೆ ತಕ್ಷಣ ಸರ್ಕಾರ ಪರಿಹಾರ ನೀಡಬೇಕೆಂದರು. ರಾಷ್ಟ್ರೀಯತೆಯನ್ನು ಪ್ರತಿಪಾದಿಸುವ ಬಿಜೆಪಿ ಅಶಾಂತಿ ಯನ್ನು ಮೂಡಿಸಿ ಮತಗಳಿಸುವ ಅಗತ್ಯವಿಲ್ಲ. ದೇಶ ವ್ಯಾಪಿ ಪಕ್ಷ ಕಾರ್ಯಕರ್ತರ ಬೆಂಬಲದಿಂದ ಸದೃಢವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶಾಂತೆಯಂಡ ರವಿ ಕುಶಾಲಪ್ಪ, ರಾಬಿನ್ ದೇವಯ್ಯ ಹಾಗೂ ನಗರ ಬಿಜೆಪಿ ಪ್ರಮುಖ ಮನು ಮಂಜುನಾಥ್ ಉಪಸ್ಥಿತರಿದ್ದರು.