ಸೋಮವಾರಪೇಟೆ, ಡಿ. 15: ಮಾನವ ಹಕ್ಕುಗಳ ಉಲ್ಲಂಘನೆ ಯಾಗದಂತೆ ಜನಸಾಮಾನ್ಯರು ಹಾಗೂ ಸಂಘ-ಸಂಸ್ಥೆಗಳು ಜಾಗ್ರತೆ ವಹಿಸಬೇಕೆಂದು ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಕ್ಷಿಣ ಭಾರತ ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂರಕ್ಷಣಾ ಘಟಕ ಮತ್ತು ಸೋಮವಾರಪೇಟೆ ಬಿ ಹಾಗೂ ಕರ್ಕಳ್ಳಿ ಒಕ್ಕೂಟಗಳ ಆಶ್ರಯದಲ್ಲಿ ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಯಾರನ್ನೂ ಘಾಸಿಗೊಳಿಸದೆ ಗೌರವಯುತವಾಗಿ ಬದುಕುವದನ್ನು ರೂಢಿಸಿಕೊಳ್ಳಬೇಕು. ಮಾನವ ಹಕ್ಕುಗಳ ದಿನಾಚರಣೆಯನ್ನು ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಯಾರನ್ನೂ ಘಾಸಿಗೊಳಿಸದೆ ಗೌರವಯುತವಾಗಿ ಬದುಕುವದನ್ನು ರೂಢಿಸಿಕೊಳ್ಳಬೇಕು. ಮಾನವ ಹಕ್ಕುಗಳ ದಿನಾಚರಣೆಯನ್ನು ಎಸ್. ಮಹೇಶ್ ಮಾತನಾಡಿ, ಇಂದು ನಮ್ಮನ್ನಾಳುವ ಸರಕಾರವೇ ಜಾತಿ ವ್ಯವಸ್ಥೆಯನ್ನು ರೂಪಿಸುತ್ತಿದೆ. ಜಾತಿ ಜಾತಿಗಳ ನಡುವೆ ಸಂಘರ್ಷವನ್ನು ಮೂಡಿಸುವ ಕೆಲಸವನ್ನು ಮಾಡುತ್ತಿರುವದು ದುರಂತ. ಮಾನವ ಹಕ್ಕುಗಳು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವದರೊಂದಿಗೆ ಅದನ್ನು ಸಂರಕ್ಷಿಸುವ ಕೆಲಸವನ್ನು ಮಾಡುತ್ತಿವೆ ಎಂದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷೆ ನಾಗಮ್ಮ, ಸೋಮವಾರಪೇಟೆ ವಲಯ ಮೇಲ್ವಿಚಾರಕ ರಮೇಶ್, ಸೇವಾಪ್ರತಿನಿಧಿ ರುಬೀನಾ ಎಂ.ಎ., ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂರಕ್ಷಣಾ ಘಟಕದ ಶೈಲಾ ಮತ್ತು ವಸಂತ್ ಉಪಸ್ಥಿತರಿದ್ದರು.