ಗೋಣಿಕೊಪ್ಪ ವರದಿ, ಡಿ. 17: ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿ ಸೈನ್ಯದಲ್ಲಿ ಯುವಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳಿವೆ ಎಂದು ಮೇಜರ್ ಜನರಲ್ ಅರ್ಜುನ್ ಮುತ್ತಣ್ಣ (ನಿವೃತ್ತ) ಅಭಿಪ್ರಾಯಪಟ್ಟರು.ಲಯನ್ಸ್ ಶಾಲಾ ಸಭಾಂಗಣದಲ್ಲಿ ಲಯನ್ಸ್ ಕ್ಲಬ್, ಚಾರಿಟೇಬಲ್ ಟ್ರಸ್ಟ್ ಮತ್ತು ಕೊಡಗು ಎಜುಕೇಶನಲ್ ಸೋಷಿಯಲ್ ಸರ್ವಿಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಕೆರಿಯರ್ ಗೈಡೆನ್ಸ್ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಗೋಣಿಕೊಪ್ಪ ವರದಿ, ಡಿ. 17: ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿ ಸೈನ್ಯದಲ್ಲಿ ಯುವಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳಿವೆ ಎಂದು ಮೇಜರ್ ಜನರಲ್ ಅರ್ಜುನ್ ಮುತ್ತಣ್ಣ (ನಿವೃತ್ತ) ಅಭಿಪ್ರಾಯಪಟ್ಟರು.

ಲಯನ್ಸ್ ಶಾಲಾ ಸಭಾಂಗಣದಲ್ಲಿ ಲಯನ್ಸ್ ಕ್ಲಬ್, ಚಾರಿಟೇಬಲ್ ಟ್ರಸ್ಟ್ ಮತ್ತು ಕೊಡಗು ಎಜುಕೇಶನಲ್ ಸೋಷಿಯಲ್ ಸರ್ವಿಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಕೆರಿಯರ್ ಗೈಡೆನ್ಸ್ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಪರೀಕ್ಷೆಗಳು ಕ್ಲಿಷ್ಟಕರವಾಗಿದ್ದು ವಿದ್ಯಾರ್ಥಿಗಳು ಪೂರ್ವ ತಯಾರಿ ನಡೆಸಬೇಕೆಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಗಗನಸಖಿ ದಿವ್ಯಾ ಕಾವೇರಪ್ಪ ಮಾತನಾಡಿ, ವಿಮಾನಯಾನ ಕ್ಷೇತ್ರ ಅತಿ ದೊಡ್ಡ ಉದ್ಯಮವಾಗಿ ಬೆಳೆದಿದೆ. ಪೈಲೆಟ್, ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಕ್ಷೇತ್ರಕ್ಕೆ ಅವಶ್ಯವಿರುವ ಟ್ರಾಫಿಕ್ ಕಂಟ್ರೋಲ್, ಹಣಕಾಸು ಹಾಗೂ ಮಾರ್ಕೆಟಿಂಗ್ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ಹುದ್ದೆಗೆ ಅನುಗುಣವಾಗಿ ವೇತನವು ಆಕರ್ಷಕವಾಗಿದೆ ಎಂದರು.

ಕ್ಯಾ. ಪಟ್ಟಡ ದೀಪಕ್ ಕಾರ್ಯಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಗೌರವಯುತ ನೌಕರಿ ಪಡೆಯಲು ಉನ್ನತ ಅವಕಾಶವಿದೆ.

ಖಾಸಗಿ ಕಂಪೆನಿಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತಿಯಿಲ್ಲದವರು ನಾಗರಿಕ ಸೇವೆಯನ್ನು ಆಯ್ಕೆ ಮಾಡಿಕೊಂಡಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಬಹುದು. ಪರೀಕ್ಷೆಗಳನ್ನು ಸ್ಪರ್ಧಾತ್ಮಕ ಮನೋಭಾವದಿಂದ ಸವಾಲಾಗಿ ಸ್ವೀಕರಿಸಿದರೆ ಸುಲಭವಾಗಿ ತೇರ್ಗಡೆಯಾಗಬಹುದು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪಟ್ಟಡ ಹರಿ ನಾಣಯ್ಯ ಹಾಗೂ ಮಂಡೇಪಂಡ ರತನ್ ಕುಟ್ಟಯ್ಯ ಕ್ರೀಡಾಕ್ಷೇತ್ರ ಮತ್ತು ವಿವಿಧ ಕ್ಷೇತ್ರದಲ್ಲಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.