ಮಡಿಕೇರಿ, ಡಿ. 18: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮತ್ತು ಸಿದ್ದಾಪುರ ಪ್ರೌಢಶಾಲಾ ಆಡಳಿತ ಮಂಡಳಿ ವತಿಯಿಂದ ಸಿದ್ದಾಪುರ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಸಮಾರಂಭ ತಾ. 21 ರಂದು ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಲೆಯ ಪ್ರಾಂಶುಪಾಲ ವೇಣುಗೋಪಾಲ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ತಾ. 21 ರಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ವೀರಾಜಪೇಟೆಯ ಕಾವೇರಿ ಆಶ್ರಮದ ಶ್ರೀ ವಿವೇಕಾನಂದ ಸ್ವಾಮೀಜಿ, ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ಭೋದಸ್ವರೂಪಾನಂದ ಸ್ವಾಮೀಜಿ, ವೀರಾಜಪೆÉೀಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರವಿಶಂಕರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯದರ್ಶಿಗಳಾದ ಪಿ.ಸಿ. ಕುಶಾಲಪ್ಪ ವಿಶೇಷ ಆಹ್ವಾನಿತ ರಾಗಿರುತ್ತಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಭಾಗ್ಯ, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಉಪಸ್ಥಿತರಿರುವರು.
1967 ರಲ್ಲಿ 11 ಎಕರೆ ಜಾಗದಲ್ಲಿ ಪ್ರಾರಂಭಗೊಂಡ ಶಾಲೆ ಪ್ರೌಢ ಶಿಕ್ಷಣ, ಪದವಿಪೂರ್ವ ಶಿಕ್ಷಣವನ್ನು ನೀಡುತ್ತಿದೆ.
ಆದರೆ, ಇತ್ತೀಚಿನ ವರ್ಷಗಳಲ್ಲಿ ಸಿದ್ದಾಪುರ ವ್ಯಾಪ್ತಿಯಲ್ಲಿ ಖಾಸಗಿ ಶಾಲೆಗಳ ಸಂಖ್ಯೆ ಹೆಚ್ಚಾದ ಕಾರಣ ಈ ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿತ್ತು. ಶಾಲೆಯ ನಿರ್ವಹಣೆ ಕಷ್ಟಸಾಧ್ಯವಾದ ಕಾರಣ ಅನಿವಾರ್ಯವಾಗಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಸಹಕಾರ ಪಡೆದು ಶಾಲೆಯನ್ನು ನಡೆಸಬೇಕಾಗಿದೆ. ಇದೀಗ ಟ್ರಸ್ಟ್ನ ಉಸ್ತುವಾರಿಯಲ್ಲಿರುವ ಶಾಲೆ ಅಭಿವೃದ್ಧಿ ಹೊಂದುತ್ತಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯಗಳು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಕಾರ್ಯದರ್ಶಿ ಗಳಾದ ಪಿ.ಸಿ. ಕುಶಾಲಪ್ಪ, ಉಪಾಧ್ಯಕ್ಷ ಮಂಡೇಪಂಡ ರಮೇಶ್, ದಾನಿಗಳಾದ ಎ.ಸಿ. ಸುಬ್ಬಯ್ಯ, ಪ್ರಚಾರ ಸಮಿತಿ ಸಂಚಾಲಕ ಎ.ಎನ್. ವಾಸು, ಆಚರಣಾ ಸಮಿತಿ ಸಂಚಾಲಕ ರೆಜಿತ್ ಕುಮಾರ್ ಉಪಸ್ಥಿತರಿದ್ದರು.