ಮಡಿಕೇರಿ, ಡಿ.19 : ಮಡಿಕೇರಿ ನಗರದ ಭಾರತೀಯ ವಿದ್ಯಾಭವನದ ಕೊಡಗು ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವ ಹಳೇ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ವಿದ್ಯಾಲಯದ ಏಳಿಗೆಗೆ ಮತ್ತು ವಿದ್ಯಾರ್ಥಿಗಳ ವಿಕಸನಕ್ಕಾಗಿ ವಿವಿಧ ಕಾರ್ಯಕ್ರಗಳನ್ನು ಹಮ್ಮಿಕೊಳ್ಳಲು ಹಳೇ ವಿದ್ಯಾರ್ಥಿಗಳ ಸಂಘ ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಮುಖರು, ಮುಂಬರುವ ದಿನಗಳಲ್ಲಿ ಸಂಘದ ಮೂಲಕ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ತಾ.23 ರಂದು ಶಾಲೆಯ ಆವರಣದಲ್ಲಿ ಸಂಘ ಉದ್ಘಾಟನೆಗೊಳ್ಳಲಿದ್ದು, ಸುಮಾರು 350ಕ್ಕೂ ಅಧಿಕ ಹಳೇ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಳೇ ವಿದ್ಯಾರ್ಥಿಗಳು ಇದೀಗ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನದಲ್ಲಿದ್ದು, ಇವರುಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಶಾಲಾ ಆವರಣದಲ್ಲಿ ಅಚ್ಚುಕಟ್ಟಾದ ಗ್ರಂಥಾಲಯವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಲಾಗಿದೆ. ಸುಮಾರು 2 ಸಾವಿರ ವಿದ್ಯಾರ್ಥಿಗಳು ಕೊಡಗು ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದು, ಇವರೆಲ್ಲರನ್ನು ಒಗ್ಗೂಡಿಸುವ ಮತ್ತು ಇವರೆಲ್ಲರಿಂದ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿಯನ್ನು ಸಂಘ ಹೊಂದಿದೆ ಎಂದು ಪ್ರಮುಖರು ತಿಳಿಸಿದರು.

ಈಗಾಗಲೆ 350 ಮಂದಿ ಸದಸ್ಯತ್ವವನ್ನು ಪಡೆದಿದ್ದು, ಎಲ್ಲರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಲಾಗುವ ದೆಂದರು. ತಾ.23 ರಂದು ಸಂಜೆ 5.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಇ. ಸೀನಿವಾಸನ್ ಉಪಸ್ಥಿತರಿರುವರು.

ಸುದ್ದಿಗೋಷ್ಠಿಯಲ್ಲಿ ಹಳೇ ವಿದ್ಯಾರ್ಥಿ ಸಂಘÀದ ಚನ್ನರಾಜು ಮಹೀಂದ್ರ, ವಂಶಿ ತಿಮ್ಮಣ್ಣ, ಸಾಲಿಹಾ ಮಜೀóದ್, ಸಿ.ಎಸ್. ಗುರುದತ್ ಹಾಗೂ ಸಾಯಿ ಮುತ್ತಣ್ಣ ಉಪಸ್ಥಿತರಿದ್ದರು.