ಮಡಿಕೇರಿ, ಡಿ. 18 : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘÀದ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಶೈಕ್ಷಣಿಕ ಸಮ್ಮೇಳನ ಮತ್ತು ವಿಚಾರಗೋಷ್ಠಿ ತಾ. 20 ರಂದು (ಇಂದು) ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಸ್. ಚೇತನ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕುಶಾಲನಗರದ ಜಿಎಂಪಿ ಶಾಲಾ ಆವರಣದಿಂದ ವಿವಿಧ ಕಲಾತಂಡಗಳ ಮೆರವಣಿಗೆ ನಡೆಯಲಿದ್ದು, ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವÀ ಎಂ.ಆರ್.ಸೀತಾರಾಂ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಶಶಿ ಸುಬ್ರಮಣಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ಪಶು ಸಂಗೋಪನಾ ಸಚಿವ ಎ. ಮಂಜು ಸಾಧಕರನ್ನು ಸನ್ಮಾನಿಸಲಿದ್ದಾರೆ. ಕಲಿಕೋಪಕರಣ ಪ್ರದರ್ಶನವನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಸಂಸದ ಪ್ರತಾಪಸಿಂಹ ಸೇರಿದಂತೆ ಎಸ್‍ಡಿಎಂಸಿ ಅಧ್ಯಕ್ಷರುಗಳು, ಶಿಕ್ಷಕರ ಸಂಘದ ಜಿಲ್ಲೆ ಮತ್ತು ಮೂರು ತಾಲೂಕಿನ ಪ್ರತಿನಿಧಿಗಳು, ಅಧಿಕಾರಿಗಳು, ಅಕ್ಷರ ದಾಸೋಹದ ಸಿಬ್ಬಂದಿಗಳು ಸೇರಿದಂತೆ ನಾಲ್ಕು ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಮಾರೋಪ ಸಮಾರಂಭದಲ್ಲಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ಮಾಜಿ ಸಚಿವ ಬಿ.ಎ.ಜೀವಿಜಯ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಮಾಜಿ ವಿಧಾನಪರಿಷತ್ ಸದಸ್ಯ ಅರುಣ್ ಮಾಚಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಕಿ ಸುನಿತಾ ಅವರು ರಚಿಸಿರುವ, “ನಾವೆಯ ತುಂಬಾ ನಾರಿಕೇಳ” ಪುಸ್ತಕವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅನಾವರಣಗೊಳಿಸಲಿದ್ದಾರೆ. ಇದೇ ಸಂದರ್ಭ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ ಮೂವತ್ತು ಮಂದಿ ಸಾಧಕರನ್ನು ಸನ್ಮಾನಿಸಲಾಗುವದು. ಸುಮಾರು 20 ಕಲಾತಂಡಗಳು ಮೆರವಣಿಗೆಯ ಆಕರ್ಷಣೆಯಾಗಿದೆ ಎಂದು ಮಾಹಿತಿ ನೀಡಿದರು.
ಶೈಕ್ಷಣಿಕ ಸಮ್ಮೇಳನದ ಯಶಸ್ಸಿಗಾಗಿ ದಾನಿಗಳಾದ ನಾಪಂಡ ಎಂ.ಮುತ್ತಪ್ಪ ಅವರು ರೂ. 10 ಲಕ್ಷ ಉದಾರ ನೆರವನ್ನು ನೀಡಿ ಸಹಕರಿಸಿದ್ದಾರೆ ಎಂದರು. ಶಿಕ್ಷಕರುಗಳಿಗೆ ಒಒಡಿ ನೀಡಲಾಗುವ ದೆಂದು ಚೇತನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಸಹ ಕಾರ್ಯದರ್ಶಿ ಪುದಿಯನೆರವನ ರೇವತಿ, ಮಡಿಕೇರಿ ತಾಲೂಕು ಅಧ್ಯಕ್ಷ ಪಿ.ಎಸ್. ಜನಾರ್ಧನ ಹಾಗೂ ಖಜಾಂಚಿ ಸಿ.ಆರ್. ಜ್ಯೋತಿ ಉಪಸ್ಥಿತರಿದ್ದರು.