ಮೂರ್ನಾಡು, ಡಿ. 23: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಪಟ್ಟಣದಲ್ಲಿ ಜಾಥಾ ನಡೆಯಿತು. ಮೂರ್ನಾಡು ಸರಕಾರಿ ಸಂಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳು ಬ್ಯಾಂಡ್ ಸೆಟ್‍ನೊಂದಿಗೆ ಪಟ್ಟಣದ ಮುಖ್ಯ ಬೀದಿಯಲ್ಲಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಬಳಿಕ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಚೇತನ್ ಮಾತನಾಡಿ, ಮಕ್ಕಳು ಅಪರಾಧದಿಂದ ದೂರವಿರಬೇಕು. ಚಿಕ್ಕಂದಿನಲ್ಲಿ ಅಪರಾಧ ಎಸಗಿದವರಿಗೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಂಡು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.

ಈ ಸಂದರ್ಭ ಮೂರ್ನಾಡು ಪೊಲೀಸ್ ಉಪಠಾಣೆಯ ಸಹಾಯಕ ಉಪ ನಿರೀಕ್ಷಕ ರುದ್ರೇಶ್, ಸಿಬ್ಬಂದಿಗಳಾದ ಮೇದಪ್ಪ, ಪ್ರೌಢಶಾಲಾ ಪ್ರಬಾರ ಶಿಕ್ಷಕಿ ದೇಚಮ್ಮ, ದೈಹಿಕ ಶಿಕ್ಷಕ ತಮ್ಮಯ್ಯ ಹಾಜರಿದ್ದರು.