ಮಡಿಕೇರಿ, ಡಿ. 23: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ‘ಮಾನವ ಕುಲದ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ಕೇಂದ್ರ ವಿಷಯದಡಿ ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಜನವರಿ 18 ಮತ್ತು 19 ರಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹತ್ತನೇ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನದ ತಾಂತ್ರಿಕ ಅಧಿವೇಶನದಲ್ಲಿ ಖ್ಯಾತ ವಿಜ್ಞಾನಿಗಳಿಂದ ಮತ್ತು ಸಂಶೋಧಕರಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳ ಸ್ನಾತಕೋತ್ತರ, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರುಗಳು, ವಿಜ್ಞಾನಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಜ್ಞಾನಾಸಕ್ತರು ಒಳಗೊಂಡಂತೆ ಸುಮಾರು 1200 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಹಾಗೆಯೇ ಭೌತ ಮತ್ತು ಗಣಿತ ವಿಜ್ಞಾನ, ರಸಾಯನ ಮತ್ತು ಜೀವ ವಿಜ್ಞಾನ, ಇಂಜಿನಿಯರಿಂಗ್ ಹಾಗೂ ಅಂತರ್ ಶಾಸ್ತ್ರೀಯ ವಿಜ್ಞಾನಗಳಿಗೆ ಸಂಬಂಧಿಸಿದ ವೈಜ್ಞಾನಿಕ ಪ್ರಾತ್ಯಕ್ಷಿಕೆಗಳನ್ನು ಪ್ರಸ್ತುತ ಪಡಿಸಲು ಸಹ ಅವಕಾಶವನ್ನು ಕಲ್ಪಿಸಲಾಗಿದೆ. ತಜ್ಞರ ಸಮಿತಿಯು ಆಯ್ಕೆ ಮಾಡಿದ ಪ್ರತಿ ವಿಷಯದ 4 ಅತ್ಯುತ್ತಮವಾದ ಪ್ರಾತ್ಯಕ್ಷಿಕೆಗಳಿಗೆ ಬಹುಮಾನ ನೀಡಲಾಗುವದು. ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ ನೋಂದಾಯಿಸಿಕೊಳ್ಳಲು ಹಾಗೂ ಸಂಶೋಧನಾ ಪ್ರಸ್ತುತಿಯ ಸಾರಾಂಶವನ್ನು ಕಳುಹಿಸಲು 2018ರ ಜನವರಿ, 5 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳನ್ನು ಅಕಾಡೆಮಿ ಸಮ್ಮೇಳನದ ವೆಬ್‍ಸೈಟ್ ತಿತಿತಿ.ಞsಣಚಿ ಛಿoಟಿಜಿeಡಿeಟಿಛಿe.ಛಿom ಹಾಗೂ ಡಾ. ಎ.ಎಂ. ರಮೇಶ್, ಹಿರಿಯ ವೈಜ್ಞಾನಿ ಕಾಧಿಕಾರಿ (ಮೊ.9845258894) ಇವರಿಂದ ಪಡೆಯಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.