ಸಿದ್ದಾಪುರ, ಜ. 11: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಂ.ಜಿ. ರಸ್ತೆಯ ಶ್ರೀ ಮುತ್ತಪ್ಪ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಇಂಟರ್ಲಾಕ್ ಕಾಮಗಾರಿಯು ನಡೆಯುತ್ತಿದ್ದು ಕಾಮಗಾರಿಯು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ರೂ. 5 ಲಕ್ಷ ವೆಚ್ಚದಲ್ಲಿ ಇಂಟರ್ಲಾಕ್ ಕಾಮಗಾರಿ ನಡೆಯುತ್ತಿದ್ದು, ಕಳಪೆ ಗುಣಮಟ್ಟದಿಂದ ಕೂಡಿದೆ. ಈ ಬಗ್ಗೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂ.ಜಿ. ರಸ್ತೆ ನಿವಾಸಿಗಳು ಒತ್ತಾಯಪಡಿಸಿದ್ದಾರೆ.