ಮಡಿಕೇರಿ, ಜ. 11: ಕೃಷಿಭಾಗ್ಯ ಯೋಜನೆಯಡಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ತರಕಾರಿ ಮಿನಿಕಿಟ್ ವಿತರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಅದರಂತೆ ಮಡಿಕೇರಿ ತಾಲೂಕಿನಲ್ಲಿ ತರಕಾರಿ ಬೆಳೆಯಲು ಆಸಕ್ತಿಯುಳ್ಳ ರೈತರು ಆರ್.ಟಿ.ಸಿ., ಆಧಾರ್ ಕಾರ್ಡ್, ಭಾವಚಿತ್ರದೊಂದಿಗೆ ಅರ್ಜಿಯನ್ನು ಕಚೇರಿಗೆ ನೀಡಿ ತರಕಾರಿ ಮಿನಿ ಕಿಟ್ ಪಡೆದುಕೊಳ್ಳಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.