ಸಿದ್ದಾಪುರ, ಜ. 12: ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿರುವ ಖಚಿತ ಸುಳಿವಿನ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖಾ ಅಧಿಕಾರಿಗಳು ದಾಳಿ ನಡೆಸಿ ಮರಳು ಹಾಗೂ ಸಾಮಗ್ರಿಗಳನ್ನು ವಶಪಡಿಸಿಕೊಂಡಿರುವ ಘಟನೆ ತ್ಯಾಗತ್ತೂರು ಗ್ರಾಮದಲ್ಲಿ ನಡೆದಿದೆ.
ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿರುವ ವೇಳೆ ಧಾಳಿ ನಡೆಸಿ ಅಕ್ರಮವಾಗಿ ತೆಗೆದಿಟ್ಟಿದ್ದ ಮರಳು ಹಾಗೂ ಮರಳು ತೆಗೆಯಲು ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳಕ್ಕೆ ಸಿದ್ದಾಪುರ ಪೋಲಿಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.