ಕುಶಾಲನಗರ, ಜ. 13: ತಾ. 16 ರಂದು ಕಾವೇರಿ ತಾಲೂಕು ಹೋರಾಟ ಸಮಿತಿಯ ಸಭೆ ಕರೆಯಲಾಗುವದು ಎಂದು ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ತಿಳಿಸಿದ್ದಾರೆ.ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಳೆದ 4 ತಿಂಗಳಿನಿಂದ ವ್ಯವಸ್ಥಿತ ಹೋರಾಟ ಮೂಲಕ ಸರಕಾರಕ್ಕೆ ಒತ್ತಾಯ ಮಾಡಲಾಗಿದೆ. ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಭರವಸೆ ನೀಡಿರುವದಾಗಿ ತಿಳಿಸಿದರು.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಸ್ತಾವಿತ ತಾಲೂಕು ವ್ಯಾಪ್ತಿಯ 19 ಸ್ಥಾನೀಯ ಸಮಿತಿಗಳ ಪದಾಧಿಕಾರಿಗಳನ್ನು ಅಂದು ಕುಶಾಲನಗರ ಕನ್ನಿಕಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಸಭೆ ಸೇರಿಸಿ ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗುವದು ಎಂದರು. ಗೋಷ್ಠಿಯಲ್ಲಿ ಕೆ.ಎನ್.ದೇವರಾಜ್, ಅಬ್ದುಲ್ ಖಾದರ್, ಎಂ.ಕೆ.ಗಣೇಶ್, ಎಂ.ಇ. ಮುಸ್ತಾಫ, ಶರವಣ ಕುಮಾರ್, ಆನಂದ್ ಕುಮಾರ್ ಇದ್ದರು.