ಮಡಿಕೇರಿ, ಜ. 13: ಅಸ್ಪøಶ್ಯತೆ ನಿವಾರಣೆಗಾಗಿ ಅಂತರ್‍ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಅನುಷ್ಠಾನ ಮಾಡುತ್ತಿದ್ದು, ಯೋಜನೆಯನ್ನು ಸರಳೀಕರಣ ಹಾಗೂ ಪ್ರೋತ್ಸಾಹ ಧನದ ತ್ವರಿತ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ತಂತ್ರಾಂಶವನ್ನು ಸಿದ್ಧಪಡಿಸಲಾಗಿದೆ. ಅಂತರ್‍ಜಾತಿ ವಿವಾಹಿತ ದಂಪತಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಬಗ್ಗೆ ತಿಳಿಯಲು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ ತಿತಿತಿ.sಛಿhoಟಚಿಡಿshiಠಿ.gov.iಟಿ ಅಥವಾ 08272-223552 ಸಂಪರ್ಕಿಸಬಹುದು.