ಸೋಮವಾರಪೇಟೆ, ಜ. 12: ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸ ಲಾಗಿದೆ ಎಂದು ಅಧ್ಯಕ್ಷ ಕೆ.ಎನ್. ದೀಪಕ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 3 ರಂದು ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರಿಗೆ ರಾಜ್ಯ ಮಟ್ಟದ ಮುಕ್ತ ನೃತ್ಯೋತ್ಸವ ಹಾಗೂ 14 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ನೃತ್ಯೋತ್ಸವ ನಡೆಯಲಿದೆ. ನಂತರ ಭ್ರಷ್ಟಾಚಾರ ವಿರುದ್ಧ ಜಾಗೃತಿ ಹಾಗೂ ತಾಲೂಕು ಸಮಾವೇಶ ನಡೆಸಲಾಗುವದು ಎಂದರು. ರಾಜ್ಯ ಮಟ್ಟದ ಮುಕ್ತ ನೃತ್ಯ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 25 ಸಾವಿರ, ದ್ವಿತೀಯ ರೂ. 20 ಸಾವಿರ, ತೃತೀಯ ರೂ. 15 ಸಾವಿರ, ಚತುರ್ಥ ರೂ. 10 ಸಾವಿರ ಹಾಗೂ 5ನೇ ಬಹುಮಾನವಾಗಿ ರೂ. 5 ಸಾವಿರ ಮತ್ತು ಎಲ್ಲಾ ವಿಭಾಗಗಳಿಗೂ ಆಕರ್ಷಕ ಟ್ರೋಫಿಗಳನ್ನು ನೀಡ ಲಾಗುವದು. ಶಾಲಾ ವಿದ್ಯಾರ್ಥಿಗಳಿಗೆ ಪ್ರಥಮ ರೂ. 5 ಸಾವಿರ, ದ್ವಿತೀಯ ರೂ. 3 ಸಾವಿರ, ತೃತೀಯ ರೂ. 2 ಸಾವಿರ ಮತ್ತು ಎಲ್ಲಾ ವಿಭಾಗಗಳಿಗೆ ಆಕರ್ಷಕ ಟ್ರೋಫಿ ನೀಡಲಾಗುವದು ಎಂದು ಮಾಹಿತಿ ನೀಡಿದರು. ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ತಂಡಗಳು ತಾ. 31 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಹಿತಿಗಾಗಿ ಮೊ: 9008466798 ಮತ್ತು 9900595761 ಸಂಪರ್ಕಿಸ ಬಹುದು ಎಂದರು.

ಗೋಷ್ಠಿಯಲ್ಲಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಸುರೇಶ್, ಸಾಹಿತ್ಯ ಘಟಕದ ಅಧ್ಯಕ್ಷ ಕೆ.ಪಿ. ಸುದರ್ಶನ್, ನಗರ ಘಟಕದ ಅಧ್ಯಕ್ಷ ಬಿ.ಎಸ್. ಮಂಜುನಾಥ್, ಪದಾಧಿಕಾರಿಗಳಾದ ಸಂತೋಷ್ ಮತ್ತು ಜಗನ್ನಾಥ್ ಉಪಸ್ಥಿತರಿದ್ದರು.