ಮಡಿಕೇರಿ, ಜ. 13: ಲೋಕಾ ಯುಕ್ತ ಅಧಿಕಾರಿಗಳು ತಾಲೂಕು ವಾರು ಭೇಟಿ ನೀಡಿ ಕರ್ನಾಟಕ ಲೋಕಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿದ್ದು, ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಕಚೇರಿ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರದಲ್ಲಿ ನೀಡಬಹುದಾಗಿದೆ.

ಆ ನಿಟ್ಟಿನಲ್ಲಿ ತಾ. 16 ರಂದು ಸೋಮವಾರಪೇಟೆಯ ತಾಲೂಕು ಕಚೇರಿ ಆವರಣದಲ್ಲಿ, ತಾ. 17 ರಂದು ವೀರಾಜಪೇಟೆಯ ತಾಲೂಕು ಕಚೇರಿ ಹಾಗೂ ತಾ. 18 ರಂದು ಮಡಿಕೇರಿಯ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಆಯಾಯ ದಿನಗಳಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ದೂರು ಗಳನ್ನು ಸ್ವೀಕರಿಸಲಿದ್ದು, ಸಾರ್ವಜನಿಕರು ಅವಕಾಶವನ್ನು ಸದುಪಯೋಗಪಡಿಸಿ ಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿ ಬೀದಿ (08272-220797) ಇಲ್ಲಿಗೆ ಸಂಪರ್ಕಿಸ ಬಹುದಾಗಿದೆ.