ಮಡಿಕೇರಿ, ಜ. 20: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ನಡೆದಿರುವ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಖಾತ್ರಿ ಪಡಿಸುವದಕ್ಕಾಗಿ ಕಾಮಗಾರಿ ಪರಿವೀಕ್ಷಣಾ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯೊಂದು ನಗರದಲ್ಲಿದ್ದು, ಸಹಾಯಕ ಕಾರ್ಯಪಾಲಕ ಅಭಿಯಂತರರು ಕಚೇರಿಗೆ ನಿರಂತರವಾಗಿ ಗೈರು ಹಾಜರಾಗುವ ಮೂಲಕ ಲೋಪವೆಸಗುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದ ಗೌಳಿಬೀದಿಗೆ ತೆರಳುವ ರಸ್ತೆಯ ಎಡಭಾಗದ ಮನೆಯೊಂದರಲ್ಲಿ ಯಾರಿಗೂ ಕಾಣದ ಪ್ರದೇಶದಲ್ಲಿ ಕಾಮಗಾರಿ ಪರಿವೀಕ್ಷಣಾ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಇದ್ದು, ಸಹಾಯಕ ಕಾರ್ಯಪಾಲಕ ಅಭಿಯಂತರರು ನಿರಂತರವಾಗಿ ಗೈರು ಹಾಜರಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.