ಸೋಮವಾರಪೇಟೆ, ಜ. 20: ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರು ನೌಕರನೊಬ್ಬನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ವರದಿ ಆಗಿದೆ. ಇಲ್ಲಿನ ತಾಲೂಕು ಪಂಚಾಯಿತಿಯ ಉದ್ಯೋಗ ಖಾತ್ರಿ ಯೋಜನೆಯ ತಾಂತ್ರಿಕ ಸಹಾಯಕನಾಗಿ ಕೆಲಸ ಮಾಡುತಿದ್ದ ರಂಜಿತ ಎಂಬವರು ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಮಶಾನ ಅಭಿವೃದ್ಧಿ ಕಾಮ ಗಾರಿಗೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪಿ. ಚಂದ್ರಶೇಖರ್ ಅವರ ಬೆರಳಚ್ಚು (ಥಂಬ್) ಇಲ್ಲದೆ ಹಣ ಪಾವತಿ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿ üಕಾರಿಗಳು ಪರಿಶೀಲಿಸಿದರು.
ಈ ಸಂದರ್ಭ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾದಿ üಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡಿರುವ ಡಿಜಿಟಲ್ ಕೀಯನ್ನು ದುರುಪಯೋಗಪಡಿಸಿಕೊಂಡು ಕಾಮಗಾರಿಗಳಿಗೆ ನಕಲಿ ಥಂಬ್ ನೀಡಿ ಹಣವನ್ನು ನೀಡಿರುವದು ತಿಳಿದು ಬಂದಿದೆ. ಈ ಕುರಿತು ಸಿಇಓ ಅವರು ಸಂಬಂಧಿತ ನೌಕರ ರಂಜಿತ್ ಅವರನ್ನು ವಿಚಾರಿಸಿದಾಗ, ಕಾರ್ಯ ನಿರ್ವಹಣಾಧಿಕಾರಿಗಳು ಗ್ರಾಮ ಪಂಚಾಯಿತಿ ಕೆಲಸ ಕಾರ್ಯಗಳಿಗೆ ಆಗಾಗ ಸ್ಥಳ ಪರಿಶೀಲನೆ ಮಾಡಲು ತೆರಳುವ ಪ್ರಯುಕ್ತ ಉದ್ಯೋಗ ಖಾತ್ರಿ ಕಾಮಗಾರಿಗೆ
(ಮೊದಲ ಪುಟದಿಂದ) ಸಂಬಂಧಪಟ್ಟಂತೆ ಹೆಬ್ಬೆಟ್ಟಿನ ಗುರುತನ್ನು ತನಗೆ ಹೊಂದಾಣಿಕೆ ಆಗುವ ಹಾಗೆ ಮಾಡಿಕೊಂಡಿರುವದಾಗಿ ಸಮಜಾ ಯಿಷಿಕೆ ನೀಡಿರುವದಾಗಿ ತಿಳಿದು ಬಂದಿದೆ. ಇದರಿಂದ ಸಿಟ್ಟುಗೊಂಡ ಸಿಈಓ ರಂಜಿತ್ನ ಕಪಾಳಕ್ಕೆ ಲಘುವಾಗಿ ಬಾರಿಸಿದರೆನ್ನ ಲಾಗಿದೆ. ಮಾದಾಪುರ ಗ್ರಾಮ ಪಂಚಾಯಿತಿ ಅದ್ಯಕ್ಷರು ತಾಲೂಕು ಪಂಚಾಯಿ ಕಾರ್ಯನಿರ್ವಹಣಾಧಿಕಾರಿಯವರ ಅನುಮತಿ ಇಲ್ಲದೆ ಹಣಪಾವತಿಸಿರುವ ಕುರಿತು ಜಿಪಂ ಸಿಈಓಗೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಡಿಜಿಟಲ್ ಕೀಯನ್ನು ದುರುಪಯೋಗಪಡಿಸಿ ಕೊಂಡು ಕರ್ತವ್ಯ ದುರುಪಯೋಗ ಮಾಡಿರುವ ಕುರಿತು ಜಿಲ್ಲಾ ಪಂಚಾಯತ್ ಸಿಇಓ ನಿರ್ದೇಶನದಂತೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಚಂದ್ರಶೇಖರ್ ದೂರು ನೀಡಿದ್ದಾರೆ.
ಈ ನಡುವೆ ಆಸ್ಪತ್ರೆಯಲ್ಲಿ ನೌಕರ ರಂಜಿತ್ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವದಾಗಿ ಆರೋಪಿಸಿ ದೂರು ನೀಡಿದ್ದಾರೆ. ಡಿವೈಎಸ್ಪಿ ಮುರಳೀಧರ್ ಅವರು ಈ ಪ್ರಕರಣಗಳ ಸಂಬಂಧ ಎಸ್.ಐ. ತನಿಖೆ ನಡೆಸುತ್ತಿದ್ದು, ಸತ್ಯಾಸತ್ಯತೆ ಶೋಧನೆ ಬಳಿಕ ಮುಂದಿನ ಕ್ರಮ ಕೈಗೊಳ್ಳವದಾಗಿ ತಿಳಿಸಿದ್ದಾರೆ. ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ.