ಕುಶಾಲನಗರ, ಜ. 20: ಶ್ರೀ ಕಾಗಿನೆಲೆ ಕನಕಗುರು ಪೀಠದ ರಜತ ಮಹೋತ್ಸವದ ಕಾರ್ಯಕ್ರಮದ ಪ್ರಯುಕ್ತ ಕೊಡಗು ಜಿಲ್ಲೆಗೆ ತಾ. 29 ರಂದು ಕನಕ ಜ್ಯೋತಿ ಯಾತ್ರೆ ಆಗಮಿಸಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎನ್. ರಾಮಚಂದ್ರಪ್ಪ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಪ್ರಯುಕ್ತ ತಾ. 23 ರಂದು ಗುಂಡ್ಲುಪೇಟೆಯಿಂದ ಹೊರಡುವ ಕನಕ ಜ್ಯೋತಿ ಯಾತ್ರೆ ಕೊಡಗು ಜಿಲ್ಲೆಗೆ ಆಗಮಿಸಿ ನಂತರ ದಾವಣಗೆರೆ ಜಿಲ್ಲೆಯ ಬೆಳ್ಳೋಡಿ ಎಂಬಲ್ಲಿ ಫೆ. 8 ರಂದು ಸಮಾಪ್ತಿಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭ ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಾಧ್ಯಕ್ಷ ಎಂ.ವಿ. ಸೋಮಶೇಖರ್, ಪ್ರಮುಖರಾದ ಕೆ.ಎಂ. ಕೃಷ್ಣಮೂರ್ತಿ, ಕಾಗಿನೆಲೆ ಕನಕಪೀಠ ಧರ್ಮದರ್ಶಿಗಳಾದ ನಂಜುಂಡಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಗಣೇಶ್, ಉಮೇಶ್, ನಿರ್ದೇಶಕರಾದ ಕೃಷ್ಣಪ್ಪ, ಜಿಲ್ಲಾ ಅಧ್ಯಕ್ಷ ಮಹೇಶ್, ಪ್ರಧಾನ ಕಾರ್ಯದರ್ಶಿ ಗಂಗಾಧರ್ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.