ಮಡಿಕೇರಿ, ಜ. 20: ಸಸ್ಯ ಶಾಸ್ತ್ರಜ್ಞರಾದ ಪ್ರೊ. ಬಿ.ಜಿ.ಎಲ್. ಸ್ವಾಮಿ ಅವರ ಜನ್ಮಶತಾಬ್ಧಿ ಪ್ರಯುಕ್ತ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ‘ಹಸುರು ಹೊನ್ನು’ ಕೃತಿಯ ವಿಮರ್ಶಾತ್ಮಕ ಲೇಖನ ಸ್ಪರ್ಧೆ ಏರ್ಪಡಿಸಿದೆ. ಆಸಕ್ತರು 250 ಪದ ಮೀರದಂತೆ ವಿಮರ್ಶಾತ್ಮಕ ಲೇಖನ ಬರೆದು ಕಳುಹಿಸಬಹುದಾಗಿದ್ದು, ತಾ. 25 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆಯಾ ವಿಭಾಗದ ಮುಖ್ಯಸ್ಥರಿಂದ ದೃಢೀಕರಣ ಮಾಡಿಸಿದ ಲೇಖನ ಕಳುಹಿಸಬೇಕು. ಫೆ. 5 ರಂದು ನಡೆಯಲಿರುವ ಬಿ.ಜಿ.ಎಲ್. ಸ್ವಾಮಿ ಅವರ ಜನ್ಮಶತಾಬ್ಧಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಲೇಖನಗಳಿಗೆ ನಗದು ಬಹುಮಾನ ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಗುವದು.
ಹೆಚ್ಚಿನ ಮಾಹಿತಿಗೆ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ನಂ. 24/2, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು 560 070 ಈ ವಿಳಾಸಕ್ಕೆ ಲೇಖನ ಕಳುಹಿಸಿಕೊಡಲು ತಿಳಿಸಲಾಗಿದೆ. 080-26718939, 9483549159 ಸಂಪರ್ಕಿಸಬಹುದು.