ಮಡಿಕೇರಿ, ಜ.19 : ಭ್ರಷ್ಟಾಚಾರ ನಿಗ್ರಹ ದಳ ಮಡಿಕೇರಿ ಪೊಲೀಸ್ ಠಾಣಾ ವತಿಯಿಂದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಸಭೆ ನಡೆಯಲಿದೆ. ಜನವರಿ 22 ರಂದು ಸೋಮವಾರಪೇಟೆಯ ಪ್ರವಾಸಿ ಮಂದಿರದಲ್ಲಿ, ತಾ. 24 ರಂದು ವೀರಾಜಪೇಟೆಯ ಪ್ರವಾಸಿ ಮಂದಿರದಲ್ಲಿ ಹಾಗೂ ತಾ. 25 ರಂದು ಮಡಿಕೇರಿಯ ಪ್ರವಾಸಿ ಮಂದಿರದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ 11 ಗಂಟೆಯಿಂದ 2 ಗಂಟೆಯವರೆಗೆ ಅಹವಾಲು ಸ್ವೀಕರಿಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್ ಮಡಿಕೇರಿ ಅಥವಾ 08272-222100, 9480806225 ಸಂಪರ್ಕಿಸಬಹುದು.