ಕೂಡಿಗೆ, ಜ. 20: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುದುಗೂರು-ಕಾಳಿದೇವರ ಹೊಸೂರು ಶ್ರೀ ಕಾಳಿಕಾಂಬ ಯುವಕ ಸಂಘ ಹಾಗೂ ಗ್ರಾಮಸ್ಥರ ವತಿಯಿಂದ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಎರಡು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಉತ್ಸವ ಇಂದು ಚಾಲನೆ ನೀಡಲಾಯಿತು.

ಪುರುಷರ ಕಬಡ್ಡಿ ಮತ್ತು ಮಹಿಳೆಯರ ಥ್ರೋಬಾಲ್ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿಯನ್ನು ಬೆಳೆಗುವದರ ಮೂಲಕ ಸಂಘದ ಅಧ್ಯಕ್ಷ ಗಿರೀಶ್ ಚಾಲನೆ ನೀಡಿದರು. ಧ್ವಜಾರೋಹಣವನ್ನು ಉಮಾಮಹೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ.ಚಾಮಿ ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮವನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ದೀಪ ಬೆಳಗುವದರ ಮೂಲಕ ಉದ್ಘಾಟಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವದರಿಂದ ಸೌಹಾರ್ದ ಮನೋಭಾವ ಬೆಳೆಯುತ್ತದೆ ಎಂದರು.

ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೋಭಾ ಪುಟ್ಟಪ್ಪ ಮಾತನಾಡಿ ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ದೃಢತೆ ಹೆಚ್ಚಾಗುತ್ತದೆ ಎಂದರು.

ದೇವಾಲಯದ ಸಮಿತಿಯ ಅಧ್ಯಕ್ಷ ಟಿ.ಎಂ.ಚಾಮಿ ಮಾತನಾಡಿ, ಕ್ರೀಡಾಪಟುಗಳಿಗೆ ಉತ್ತೇಜನ ನೀಡುವದರ ಜೊತೆಯಲ್ಲಿ ಇಂತಹ ಕ್ರೀಡಾಕೂಟಗಳನ್ನು ಏರ್ಪಡಿಸುವಿಕೆ ಯಿಂದ ಗ್ರಾಮದ ಪ್ರಗತಿಗೆ ಸಹಕಾರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕಾಳಿಕಾಂಬ ಯುವಕ ಸಂಘದ ಅಧ್ಯಕ್ಷ ಗಿರೀಶ್ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಹೆಚ್.ಎಸ್.ರವಿ, ಗ್ರಾ.ಪಂ ಮಾಜಿ ಅಧ್ಯಕ್ಷ ಕೆ.ಬಿ.ಧನಂಜಯ್, ಮಾಜಿ ಸದಸ್ಯರಾದ ವಿಮಲ ಸುರೇಶ್, ಜಾನಮ್ಮ, ಅಕ್ಕಮ್ಮ, ಮಾರ, ರಾಮೇಶ್ವರ ನೀರು ಬಳಕೆದಾರರ ಸಂಘದ ಅಧ್ಯಕ್ಷ ಐ.ಎಸ್.ಗಣೇಶ್, ದೇವಾಲಯ ಸಮಿತಿಯ ಉಪಾಧ್ಯಕ್ಷ ಎನ್.ಎಸ್.ಮುತ್ತಪ್ಪ, ದೊಡ್ಡೀರ ಸುಶೀಲ, ಸಿ.ಎಂ.ಮಂಜುನಾಥ್ ಮತ್ತಿತರರು ಇದ್ದರು. ಹೆಚ್.ಎಸ್.ರವಿ ಸ್ವಾಗತಿಸಿ ವಂದಿಸಿದರು.

ಕ್ರೀಡಾಕೂಟದಲ್ಲಿ ಕಾಳಿದೇವನ ಹೊಸೂರು, ಹುದುಗೂರು, ಕೂಡಿಗೆ, ಯಡವನಾಡು ಒಳಗೊಂಡಂತೆ 15ಕ್ಕೂ ಅಧಿಕ ತಂಡಗಳು ಕಬಡ್ಡಿ ಪಂದ್ಯಾಟ ದಲ್ಲಿ ಹಾಗೂ ಥ್ರೋಬಾಲ್‍ನಲ್ಲಿ 8 ತಂಡಗಳು ಪಾಲ್ಗೊಂಡಿದ್ದವು.