ಮಡಿಕೇರಿ, ಜ. 21: ಸೋಮವಾರಪೇಟೆ ತಾ.ಪಂ. ಸಿಬ್ಬಂದಿ ರಂಜಿತ್ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಯ ಅನುಮತಿ ಇಲ್ಲದೆ ಹಣ ಪಾವತಿಸಿದ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ತಾ.ಪಂ. ಕಚೇರಿಗೆ ಭೇಟಿ ನೀಡಿದ ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ರಂಜಿತ್‍ನ ಕಪಾಳಕ್ಕೆ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕತ್ರಯರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.