ಮಡಿಕೇರಿ, ಜ. 21: ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ತಾ. 24 ರಂದು ಮಡಿಕೇರಿಯಲ್ಲಿ ‘ಉದ್ಯೋಗಮೇಳ’ವನ್ನು ಆಯೋಜಿಸಲಾಗಿರುತ್ತದೆ. ಈ ಉದ್ಯೋಗಮೇಳದಲ್ಲಿ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ, ಡಿಪ್ಲೋಮ ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಲು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.

ಮೇಳವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ತಾ. 24 ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 2 ಗಂಟೆವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದೆ.