ಸೋಮವಾರಪೇಟೆ, ಜ.21: ಪಾಶ್ಚಿಮಾತ್ಯ ಸಂಸ್ಕøತಿಗೆ ಮಾರು ಹೋಗುತ್ತಿರುವ ಪ್ರಸ್ತುತÀ ದಿನಗಳÀಲ್ಲಿ ಗ್ರಾಮೀಣ ಸೊಗಡಿನ ಸಂಸ್ಕøತಿಯ ಉಳಿವಿಗೆ ಸಮಾಜದ ಸಹಭಾಗಿತ್ವ ಅಗತ್ಯ ಎಂದು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಭಿಪ್ರಾಯಪಟ್ಟರು.ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಮತ್ತು ತಾಲೂಕು ಯುವ ಒಕ್ಕೂಟ, ನೇಗಳ್ಳೆ ವೀರಭದ್ರೇಶ್ವರ ಯುವಕ ಸಂಘಗಳ ಆಶ್ರಯದಲ್ಲಿ ಸಮೀಪದ ನೇಗಳ್ಳೆ ಗ್ರಾಮದ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಯುವ ಜನ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮೀಣ ಭಾಗದ ಪ್ರತಿಭೆಗಳ ಪ್ರೋತ್ಸಾಹಕ್ಕೆ ಇಂತಹ ಮೇಳಗಳು ಸೂಕ್ತ ವೇದಿಕೆಯಾಗಿದ್ದು, ಪಾಶ್ಚಿಮಾತ್ಯ ಸಂಸ್ಕøತಿಯ ಅಬ್ಬರದಲ್ಲಿ ಗ್ರಾಮೀಣ ಸೊಗಡಿನ ಸಂಸ್ಕøತಿ ಉಳಿಯ ಬೇಕಾಗಿದೆ. ಈ ನಿಟ್ಟಿನಲ್ಲಿ ಯುವಕ ಹಾಗೂ ಯುವತಿ ಮಂಡಳಿಗಳು ಹೆಚ್ಚು ಕಾರ್ಯೋನ್ಮುಖವಾಗಬೇಕಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಭದ್ರೇಶ್ವರ ಯುವಕ ಸಂಘದ ಅಧ್ಯಕ್ಷ ಎನ್.ಎಂ. ದಿವಾಕರ್ ವಹಿಸಿದ್ದರು. ವೇದಿಕೆಯಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಮಾಜೀ ಅಧ್ಯಕ್ಷೆ ಐಮುಡಿಯಂಡ ರಾಣಿ ಮಾಚಯ್ಯ, ನೇರುಗಳಲೆ ಗ್ರಾ.ಪಂ. ಸದಸ್ಯರಾದ ಎನ್.ಜೆ. ಮೇಘ, ದೇವಕಿ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಎಂ.ಡಿ. ಹರೀಶ್, ವೀರಾಜಪೇಟೆ ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಶೀಲಾ ಬೋಪಣ್ಣ, ಮಡಿಕೇರಿ ಅಧ್ಯಕ್ಷ ನವೀನ್ ದೇರಳ, ಸೋಮವಾರಪೇಟೆ ಅಧ್ಯಕ್ಷ ಶೋಭರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ, ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ ಉಪಸ್ಥಿತರಿದ್ದರು.

ಜಿಲ್ಲಾದ್ಯಂತ ಯುವಕ-ಯುವತಿ ಮಂಡಳಿಯ ಸದಸ್ಯರುಗಳು ಯುವ ಜನ ಮೇಳದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಭಾವ ಗೀತೆ, ಲಾವಣಿ, ರಂಗ ಗೀತೆ, ಏಕಪಾತ್ರಾಭಿನ ಯ, ಗೀ ಗೀ ಪದ, ಕೋಲಾಟ, ಜಾನಪದ ನೃತ್ಯಗಳು, ರಾಗಿ ಬೀಸುವ ಪದ, ಸೋಬಾನೆ ಪದ, ಭಜನೆ, ಜಾನಪದ ಗೀತೆ ಸೇರಿದಂತೆ ಇತರ ಸ್ಪರ್ಧೆಗಳು ನಡೆದವು.

ಗ್ರಾಮೀಣ ಭಾಗದ ಜನರು ಯುವಜನ ಮೇಳದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ತಂದರು. ಮಾಜೀ ಸೈನಿಕರುಗಳಾದ ಹೊಸಳ್ಳಿ ಗ್ರಾಮದ ತಿಮ್ಮಯ್ಯ ಹಾಗೂ ನೇಗಳ್ಳೆ ಕರ್ಕಳ್ಳಿ ಗ್ರಾಮದ ಬಸಪ್ಪ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳ ತೀರ್ಪುಗಾರರಾಗಿ ವಿಘ್ನೇಶ್ವರ ಕಾಲೇಜಿನ ಪ್ರಾಧ್ಯಾಪಕ ಜಯಕುಮಾರ್, ಮಡಿಕೇರಿಯ ರವಿಕೃಷ್ಣ, ವೀರಾಜಪೇಟೆಯ ವಾಮನ ಕಾರ್ಯನಿರ್ವಹಿಸಿದರು.