ಮಡಿಕೇರಿ, ಜ. 22: ಎಸ್‍ಡಿಎ ಮತ್ತು ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಚಿತ ತರಬೇತಿಯನ್ನು ತಾ. 23 ರಿಂದ ಪರೀಕ್ಷಾ ದಿನಾಂಕದವರೆಗೆ ಪ್ರತಿ ದಿನ ಅಪರಾಹ್ನ 3 ಗಂಟೆಗೆ ಸರಿಯಾಗಿ ಕಾಲೇಜಿನ ಮುನ್ಸಿಪಲ್ ಕಟ್ಟಡದಲ್ಲಿ ನೀಡಲಾಗುತ್ತದೆ ಎಂದು ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.