ಮಡಿಕೇರಿ, ಜ. 22: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ, ರೆಡ್ ರಿಬ್ಬನ್ ಕ್ಲಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಹಯೋಗದಲ್ಲಿ ಎಚ್.ಐ.ವಿ, ಏಡ್ಸ್ ಕುರಿತ ಉಪನ್ಯಾಸ ಕಾರ್ಯಕ್ರಮವು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಶಿವಕುಮಾರ್ ಮಾಹಿತಿ ನೀಡಿ ಎಚ್‍ಐವಿ, ಏಡ್ಸ್ ಬಗ್ಗೆ ಪ್ರತಿಯೊಬ್ಬರಲ್ಲಿ ಅರಿವು ಇರಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕಿ ಸುನೀತಾ ಮಾತನಾಡಿ, ಯುವ ಜನರು ಎಚ್.ಐ.ವಿ. ಏಡ್ಸ್ ಬಗ್ಗೆ ಜಾಗೃತಿ ಹೊಂದಿದ್ದಲ್ಲಿ, ಅದರಿಂದ ದೂರವಿರಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಪ್ರೊ. ವೈ. ಚಿತ್ರಾ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಕೆ.ಸಿ. ದಯಾನಂದ ಮಾತನಾಡಿದರು.

ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಹರ್ಷಿತ ಬಿ.ಹೆಚ್. (ಪ್ರಥಮ), ಜ್ಯೋತಿ ಡಿ.ಪಿ. (ದ್ವಿತೀಯ), ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಶಾದ್ ಎಂ.ಎಸ್. (ತೃತೀಯ) ಬಹುಮಾನ ಪಡೆದಿದ್ದಾರೆ.