ಮಡಿಕೇರಿ, ಜ. 22: ಗಣರಾಜ್ಯೋತ್ಸವ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ಆಟೋಟ ಸ್ಪರ್ಧೆಯು ತಾ. 25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಟೋಟದಲ್ಲಿ ಹಿರಿಯ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರಿಗೆ 5ನೇ ತರಗತಿಯಿಂದ 7 ನೇ ತರಗತಿಯವರೆಗೆ 100 ಮೀಟರ್ ಓಟ ಸ್ಪರ್ಧೆ, ಪ್ರೌಢಶಾಲಾ ಬಾಲಕ ಬಾಲಕಿಯರಿಗೆ 8 ನೇ ತರಗತಿಯಿಂದ 10 ನೇ ತರಗತಿಯವರೆಗೆ 400 ಮೀಟರ್ ಓಟ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಯಿಂದ ಪದವಿವರೆಗೆ 800 ಮೀಟರ್ ಓಟದ ಸ್ಪರ್ಧೆ ಜರುಗಲಿದೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ.