ನಾಪೆÇೀಕ್ಲು, ಜ. 22: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ನರಿಯಂದಡ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅಭಿಪ್ರಾಯ ಪಟ್ಟರು.
ಪಾರಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರೊಂದಿಗೆ ಪೆÇೀಷಕರು ಕೈಜೋಡಿಸುವದು ಅಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವ ಅನಿವಾರ್ಯತೆ ಇದೆ ಎಂದರು.
ಪೂರ್ವಾಹ್ನ ನಡೆದ ಕ್ರೀಡಾಕೂಟದ ಉದ್ಘಾಟನೆಯನ್ನು ಕೊಣಂಜಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೋಚಮಂಡ ಅನಿತಾ ತಮ್ಮಯ್ಯ ವಹಿಸಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಧನಂಜಯ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ನೆರೆಯಂಡಮ್ಮಂಡ ಉಮಾ ಪ್ರಭು, ಶಿಕ್ಷಕ ವೃಂದ ಇದ್ದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಮೂಹಿಕ ಅಂಗ ಸಾಧನೆ, ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ತಾಲೂಕು ಪಂಚಾಯಿತಿ ಸದಸ್ಯರು ಬಹುಮಾನ ವಿತರಿಸಿದರು.