ಮಡಿಕೇರಿ, ಜ. 22: ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಾಗ ಮಾತ್ರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯ ಎಂದು ಮಾಹಿತಿ ಹಕ್ಕು ಸಂಘಟನೆಯ ಪ್ರಮುಖರಾದ ಬಬ್ಬಿರ ಸರಸ್ವತಿ ಅಭಿಪಾಯಪಟ್ಟರು. ರಾಷ್ಟ್ರೀಯ ಸೇವಾ ಯೋಜನಾ ಘಟಕ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ಕೊಡಗು ಜಿಲ್ಲಾ ನೆಹರು ಯುವ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ನಡೆದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕು ಸಂಘಟನೆಯ ಪ್ರಮುಖರಾದ ಅಲಮಂಡ ಮೋಹನ್, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿಗಳಾದ ಡಾ. ಮಾಧವ್, ಗೀತಾಂಜಲಿ, ಮಂಜುನಾಥ್, ಸಚಿನ್ ಹಾಗೂ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.