ಸೋಮವಾರಪೇಟೆ, ಜ. 23: ಗಣರಾಜ್ಯೋತ್ಸವದ ಹಿನ್ನೆಲೆ ರಾಷ್ಟ್ರಾದ್ಯಂತ ಪ್ಲಾಸ್ಟಿಕ್ ಹಾಗೂ ಕಾಗದದ ಧ್ವಜಗಳಿಗೆ ನಿರ್ಬಂಧ ಹೇರಬೇಕೆಂದು ಹಿಂದೂ ಜನ ಜಾಗೃತಿ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದ್ದು, ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ಪ್ಲಾಸ್ಟಿಕ್ ಮತ್ತು ಕಾಗದದ ಧ್ವಜಗಳು ಕಾರ್ಯಕ್ರಮ ಮುಗಿದ ನಂತರ ರಸ್ತೆ, ಚರಂಡಿ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಎಸೆಯಲ್ಪಡುತ್ತಿದ್ದು, ಇದರಿಂದ ಧ್ವಜಕ್ಕೆ ಅವಮಾನ ಮಾಡಿದಂತಾಗುತ್ತಿದೆ. ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಈ ಬಗ್ಗೆ ಶಾಲಾ ಕಾಲೇಜು ಹಾಗೂ ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಮಿತಿಯ ಲಕ್ಷ್ಮೀನಾರಾಯಣ್ ತಿಳಿಸಿದರು.
ಈ ಸಂದರ್ಭ ಸಮಿತಿಯ ಪಿ. ಮಧು, ಕಿಬ್ಬೆಟ್ಟ ಮಧು, ಸುರೇಶ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದರೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಮನವಿ ಪತ್ರ ಸಲ್ಲಿಸಲಾಯಿತು.