ಕುಶಾಲನಗರ, ಫೆ. 4: ಕೊಡಗು ಜಿಲ್ಲೆಯ ಬುಡಕಟ್ಟು ಮೂಲ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸರಕಾರ ನಿರ್ಲಕ್ಷ್ಯ ತಾಳಿರುವದನ್ನು ವಿರೋಧಿಸಿ ತಾ. 9 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಎಂದು ಸೋಮವಾರಪೇಟೆ ತಾಲೂಕು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಆರ್.ಕೆ. ಚಂದ್ರ ಹೇಳಿದ್ದಾರೆ.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕಳೆದ 25 ವರ್ಷಗಳಿಂದ ಯಡವನಾಡು ರಕ್ಷಿತಾರಣ್ಯ ಪ್ರದೇಶದಲ್ಲಿ ನೆಲೆಸಿರುವ ಆದಿವಾಸಿಗಳನ್ನು ತೆರವುಗೊಳಿಸಿ ಅರಣ್ಯ ಹಕ್ಕು ಕಾಯ್ದೆ ಉಲ್ಲಂಘಿಸಲಾಗಿದೆ ಎಂದರು.

ಗೋಷ್ಠಿಯಲ್ಲಿ ರಾಜ್ಯ ಮೂಲ ಆದಿವಾಸಿಗಳ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಆರ್. ರವಿ, ನಿರ್ದೇಶಕ ಜೆ.ಹೆಚ್. ಸುರೇಶ, ಯಡವನಾಡು ಬುಡಕಟ್ಟು ಮೂಲನಿವಾಸಿ ಕೃಷಿಕ ಸಮಾಜದ ದಿನೇಶ್, ಜೆ.ಕೆ. ಕಂದ ಇದ್ದರು.