ಸೋಮವಾರಪೇಟೆ, ಫೆ. 4: ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ತಾ. 24 ರಂದು ವಚನ ಕ್ರಾಂತಿಯ ಪುನರುತ್ಥಾನ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಲು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಇಲ್ಲಿನ ಪತ್ರಿಕಾಭವನದಲ್ಲಿ ಪರಿಷತ್‍ನ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಂದು ದಿನದ ವಿಚಾರಗೋಷ್ಠಿಯನ್ನು ಜಿಲ್ಲೆಯ ಚಿಕ್ಕಅಳುವಾರ ಗ್ರಾಮದ ಮಂಗಳೂರು ವಿಶ್ವ ವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಲು ತೀರ್ಮಾನಿಸ ಲಾಯಿತು. ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗ ಹಾಗೂ ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ನಂತರ ಎರಡು ಗೋಷ್ಠಿಗಳು ನಡೆಯಲಿದ್ದು, ಕಾರ್ಯಕ್ರಮಕ್ಕೆ ಸರ್ವಾಧ್ಯಕ್ಷರನ್ನಾಗಿ ನಿವೃತ್ತ ಪ್ರೊ. ಸಿ.ಎಂ. ಧರ್ಮಪ್ಪ ಅವರನ್ನು ಆಯ್ಕೆ ಮಾಡಲಾಯಿತು. ವಿಚಾರ ಮಂಡನೆಗಾಗಿ ಮೈಸೂರು, ಮಂಗಳೂರು ಹಾಗೂ ಹಾಸನದಿಂದ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ ಮಾತನಾಡಿ, ಜಿಲ್ಲೆಯಲ್ಲಿ ಶರಣ ಸಾಹಿತ್ಯ ಪರಿಷತ್‍ನ ವತಿಯಿಂದ ರಚನಾತ್ಮಕ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿರುವದು ಶ್ಲಾಘನೀಯ, ಈ ಹಿಂದೆ ವಚನ ದಿನ ಕಾರ್ಯಕ್ರಮ ವನ್ನು ಅರ್ಥಪೂರ್ಣ ವಾಗಿ ಆಚರಿ¸ Àಲಾಯಿತು ಎಂದರು.

ಸಭೆಯಲ್ಲಿ ಸಿಡಿಗಳಲೆ ಮಠಾಧೀಶರಾದ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್, ಖಜಾಂಚಿ ಡಿ.ಬಿ. ಸೋಮಪ್ಪ, ತಾಲೂಕು ಘಟಕದ ಅಧ್ಯಕ್ಷ ಮಹದೇವಪ್ಪ ಸೇರಿದಂತೆ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.