ನಾಪೋಕ್ಲು, ಫೆ. 4: ಶಾರೀರಿಕ ಶಕ್ತಿ, ಬೌದ್ಧಿಕ ಶಕ್ತಿ, ನೈತಿಕ ಶಕ್ತಿ ಹಾಗೂ ಆಧ್ಯಾತ್ಮಿಕ ಶಕ್ತಿಗಳು ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮಾಧವ ಹೇಳಿದರು.
ಸಮೀಪದ ಹೊದವಾಡ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮನೋಜ್ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಬಾರ ಪ್ರಾಂಶುಪಾಲ ಡಾ. ಕಾವೇರಿ ಪ್ರಕಾಶ್, ಶಿಬಿರಾಧಿಕಾರಿ ಬಿ.ಎಸ್. ವಿನೋದ್, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಹೆಚ್.ಎ. ಹಂಸ, ಉಪನ್ಯಾಸಕಿ ಗೀತಾ ಮತ್ತಿತರರು ಉಪಸ್ಥಿತರಿದ್ದರು. ಕೋಲಾರದ ಜಾದುಗಾರ ಕಿಶೋರ್ ಜಾದೂ ಪ್ರದರ್ಶನ ನೀಡಿದರು.ಬಳಿಕ ಶಿಬಿರಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ಜರುಗಿತು.