ವೀರಾಜಪೇಟೆ, ಫೆ. 4: ಶಿಕ್ಷಣ ಲಭಿಸಿದ ಎಲ್ಲಾ ವಿದ್ಯಾರ್ಥಿಗಳು ಸಾಮಾಜಿಕ ಸ್ಥರಗಳಲ್ಲಿ ಸಕಾರಾತ್ಮಕ ಚಿಂತನೆಯೊಂದಿಗೆ ರಾಷ್ಟ್ರ ಜಾಗೃತಿ ಯಲ್ಲಿ ಕೈಜೋಡಿಸುವಂತಾಗಬೇಕು ಎಂದು ಕಾವೇರಿ ಕಾಲೇಜಿನ ಕನ್ನಡ ಉಪನ್ಯಾಸಕ ಪ್ರೊ. ಎಂ.ಬಿ. ಕಾವೇರಪ್ಪ ಅಭಿಪ್ರಾಯಪಟ್ಟರು.
ಪಾಲಿಬೆಟ್ಟ ಪದವಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಕಾಲೇಜಿನ ರಂಗ ಮಂಟಪದಲ್ಲಿ ಆಯೋಜನೆಗೊಂಡ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಸುಸಂಸ್ಕøತ ಸಮಾಜ ನಿರ್ಮಾಣ ಮಾಡಬೇಕಾದರೆ ವಿದ್ಯಾರ್ಥಿಗಳು ಶಿಕ್ಷಿತರಾಗಬೇಕು. ಸಮಾಜದಲ್ಲಿ ಕಲಿತಂತಹ ವಿದ್ಯೆಯೊಂದಿಗೆ ಮೌಲ್ಯಗಳನ್ನು ಮೈಗೂಡಿಸಿಕೊಂಡು ಮುಂದುವರೆದರೆ ಸಾರ್ಥಕ ಜೀವನ ನಡೆಸಿದಂತಾಗುತ್ತದೆ ಎಂದರು.
ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದ ನಿರ್ದೇಶಕ ಶ್ರೀ ಪರಹಿತಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಶಿಕ್ಷಣದ ಸಾರವನ್ನೆರೆದು ಶಿಕ್ಷಿತರನ್ನು ರೂಪಿಸುತ್ತದೆ. ಗುರುಗಳು ಭೋದನೆ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕಲು ಪ್ರೇರೇಪಣೆ ಮಾಡಿದಂತಾಗುತ್ತದೆ. ಸಮಾಜದ ಮುಖ್ಯವಾಹಿನಿಗೆ ಬರಲು ವಿದ್ಯೆ ಮಾತ್ರ ಸಹಕಾರಿಯಾಗಿರುವದಿಲ್ಲ. ಬದಲಾಗಿ ವಿದ್ಯೆಯೊಂದಿಗೆ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಬಂದಲ್ಲಿ ಉತ್ತಮ ಪರಿಸರ ನಿರ್ಮಾಣವಾಗುವದರಲ್ಲಿ ಸಂದೇಹವಿಲ್ಲ ಎಂದು ನುಡಿದರು.
ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪುಲಿಯಂಡ ಬೋಪಣ್ಣ, ಸದಸ್ಯೆ ಕೊತಂಡ ಬೋಜಮ್ಮ ಮಂದಣ್ಣ, ಕಾಲೇಜಿನ ಪ್ರಾಚಾರ್ಯೆ ಡಾ. ಕೆ.ಎಂ. ಭವಾನಿ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಕವಾಲಿ, ತಿರುವಾದಿರ ನೃತ್ಯ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.