ಕುಶಾಲನಗರ, ಫೆ. 5: ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿಯೊಂದಿಗೆ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳ ಬೇಕಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಪ್ರಸಾದ್ ಹೇಳಿದರು.

ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಮಾದಾಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಎನ್ನೆಸ್ಸೆಸ್ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕಿದೆ. ಎನ್ನೆಸ್ಸೆಸ್ ಶಿಬಿರಗಳು ಸಮಾಜಸೇವೆ, ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು.

ಕಾಲೇಜು ಪ್ರಾಂಶುಪಾಲ ಹೆಚ್.ಕೆ. ಕೆಂಪೇಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ಕೆ.ಎಸ್. ಭಾರತಿ, ಉಪಾಧ್ಯಕ್ಷೆ ಲೀಲಾವತಿ, ಸದಸ್ಯರು ಗಳಾದ ಎಂ.ಕೆ. ಪ್ರವೀಣ್‍ಕುಮಾರ್, ಎಂ.ಪಿ.ಶಿವಪ್ಪ, ಅಭಿವೃದ್ಧಿ ಅಧಿಕಾರಿ ಶ್ಯಾಂ, ಐಪಿಎಸ್ ಪರೀಕ್ಷಣಾಧಿಕಾರಿ ಯತೀಶ್, ಡಿವೈಎಸ್ಪಿ ಪಿ.ಕೆ. ಮುರಳೀಧರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಟಿ. ಯೋಗೇಶ್, ಕರಾವಿಪ ಜಿಲ್ಲಾ ಉಪಾಧ್ಯಕ್ಷ ಎಂ.ಇ.ಮೊಯ್ದಿನ್, ಶಿಬಿರಾಧಿಕಾರಿ ಹೆಚ್.ಜೆ.ಮಂಜುನಾಥ್ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಕಾಲೇಜು ಉಪನ್ಯಾಸಕರು ಇದ್ದರು.

ಶಿಬಿರಾರ್ಥಿ ಕೆ.ಎಸ್.ವಾಸುದೇವ ಪ್ರಾರ್ಥಿಸಿದರು, ಉಪನ್ಯಾಸಕ ಹೆಚ್.ಎಸ್. ನಾಗರಾಜ್ ನಿರೂಪಿಸಿ ದರು, ಶಿಬಿರಾಧಿಕಾರಿ ಎ.ಅಸ್ಮತ್ ಸ್ವಾಗತಿಸಿದರು, ಪ್ರಮೋದ್ ವಂದಿಸಿದರು.