ಒಡೆಯನಪುರ, ಫೆ. 5: ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಲ್ಲೆ ಸಂಸ್ಕøತಿ, ಸಂಸ್ಕಾರ, ಸಂಪ್ರದಾಯ ಮುಂತಾದ ಮೌಲ್ಯಗಳನ್ನು ಕಲಿಸಿಕೊಟ್ಟರೆ ಭವಿಷ್ಯದಲ್ಲಿ ಸಭ್ಯವ್ಯಕ್ತಿಗಳಾಗಲು ಸಾಧ್ಯವಾಗುತ್ತದೆ ಎಂದು ಜಿ.ಪಂ. ಮಾಜಿ ಸದಸ್ಯ ಡಿ. ಬಿ. ಧರ್ಮಪ್ಪ ಅಭಿಪ್ರಾಯ ಪಟ್ಟರು. ಅವರು ಗೋಪಾಲಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2017-18ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ದೇಶದ ಬಗ್ಗೆ ಧನ್ಯತಾ ಭಾವವನ್ನು ಬೆಳೆಸಿಕೊಳ್ಳಬೇಕು ಇದರ ಜೊತೆಯಲ್ಲಿ ಆದ್ಯಾತ್ಮಿಕ, ಸಂಸ್ಕಾರವಂತಿಕೆಯ ಚಿಂತನೆಯನ್ನು ಬೆಳೆಸಿಕೊಂಡರೆ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.

ನಿವೃತ್ತ ಹಿರಿಯ ಶಿಕ್ಷಕ ಸಿ. ಎಲ್. ಸುಬ್ಬಯ್ಯ ಮಾತನಾಡಿ ಸರಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ, ಆದರೆ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದ್ದರಿಂದ ಸರಕಾರಿ ಶಾಲೆಗಳು ಅವನತಿಯತ್ತ ಸಾಗುತ್ತಿವೆ ಎಂದು ವಿಷಾದಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಜಿ. ಬಿ. ನಾಗಪ್ಪ, ಹಂಡ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಧುಕುಮಾರ್, ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ವಿ.ಎಂ.ರಮೇಶ್ ಮಾತನಾಡಿದರು. ಸಮಾರಂಭದಲ್ಲಿ ವಿ.ಸಿ.ಸುರೇಶ್ ಒಡೆಯನಪುರ, ಶಾಲಾ ಮುಖ್ಯಶಿಕ್ಷಕ ಅಪ್ಪಸ್ವಾಮಿ, ಎಸ್‍ಡಿಎಂಸಿ ಅಧ್ಯಕ್ಷ ಚಂದ್ರಶೇಖರ್ ಪ್ರಮುಖರಾದ ಯಶೋಧ, ರಾಜು, ಶಶಿಕಲ, ರಹಿಮಾನ್, ನಾರಾಯಣ, ಸೋಮಶೆಟ್ಟಿ ಮುಂತಾದವರಿದ್ದರು. ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಶಾಲಾ ಮಕ್ಕಳಿಂದ ರೂಪಕ, ನಾಟಕ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. -ವಿ. ಸಿ. ಒಡೆಯನಪುರ