ನಾಪೆÉÇೀಕ್ಲು, ಫೆ. 10: ಸೋಮವಾರಪೇಟೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನಂದ ಕುಮಾರ್ ಅಲ್ಪಸಂಖ್ಯಾತರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ್ದಾಗಿ ಆರೋಪಿಸಿರುವ ಕೊಡಗು ಮುಸ್ಲಿಂ ಸಮಾಜ ಇದನ್ನು ಖಂಡಿಸುವದಾಗಿ ಸಮಾಜದ ಕಾರ್ಯಾಧ್ಯಕ್ಷ ಪಿ.ಎಂ. ಖಾಸಿಂ ಹೇಳಿದ್ದಾರೆ.

ಈ ವಿಷಯದ ಬಗ್ಗೆ ಜಿಲ್ಲಾ ಕಾಂಗ್ರೆಸ್ ಸಮಿತಿಗೆ, ಉಸ್ತುವಾರಿ ಸಚಿವರಿಗೆ, ಕೆಪಿಸಿಸಿ ಅಧ್ಯಕ್ಷರಿಗೆ ಮುಖ್ಯ ಮಂತ್ರಿಗಳಿಗೆ ದೂರು ನೀಡಲಾಗುವದು ಎಂದು ತಿಳಿಸಿದರು.

ಗೋಷ್ಠಿಯಲಿ ರಾಹುಲ್ ಗಾಂಧಿ ಬ್ರಿಗೆಡ್‍ನ ಜಿಲ್ಲಾ ಕಾರ್ಯದರ್ಶಿ ಟಿ.ಎ. ಮಹಮ್ಮದ್ ಹನೀಫ್, ಕಾಂಗ್ರೆಸ್ ನಾಯಕ ಹೆಚ್.ಎ. ಹಂಸ. ನಾಪೆÉÇೀಕ್ಲು ಗ್ರಾಮ ಪಂಚಾಯಿತಿ ಸದಸ್ಯ ಪಿ.ಎಂ. ಅಬ್ದುಲ್ ಅಜೀಜ್ ಇದ್ದರು.

ಸೋಮವಾರಪೇಟೆ :ಇತ್ತೀಚೆಗೆ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್‍ನ ಉಪಾಧ್ಯಕ್ಷರೋರ್ವರು ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದು ತಕ್ಷಣವೇ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಇಲ್ಲಿನ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.

ಈ ಕುರಿತು ಇಲ್ಲಿನ ಪತ್ರಿಕಾ ಭವನದಲ್ಲಿ ಶನಿವಾರ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಎ.ಆದಂ ಮಾತನಾಡಿ, ಇತ್ತೀಚೆಗೆ ಸಮುದಾಯ ಭವನದಲ್ಲಿ ವಲಯ ಮಟ್ಟದ ಪದಾಧಿಕಾರಿಗಳ ಸಭೆಯನ್ನು ಆಯೋಜಿಸಲಾಗಿತ್ತು.ಎಐಸಿಸಿ ಮುಖಂಡರುಗಳು ಭಾಗÀವಹಿಸಿದ್ದರು. ಸಭೆ ಮುಗಿದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಲ್ಪಸಂಖ್ಯಾತ ಮುಖಂಡರುಗಳ ಭಾವಚಿತ್ರವನ್ನು ಬ್ಯಾನರ್‍ವೊಂದಕ್ಕೆ ಅಳವಡಿಸದೆಯಿರುವ ಕುರಿತು ಹಿರಿಯ ಮುಖಂಡರನ್ನು ಪ್ರಶ್ನಿಸಿದ ಸಂದರ್ಭ, ಕಾಂಗ್ರೆಸ್ ಉಪಾಧ್ಯಕ್ಷ ನಂದಕುಮಾರ್ ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರನ್ನು ಕೂಡಲೆ ಜಿಲ್ಲಾ ಕಾಂಗ್ರೆಸ್‍ನ ಉಪಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ.ಜಿ.ಇಂದ್ರೇಶ್, ಪರಿಶಿಷ್ಟಜಾತಿ ಮತ್ತು ಪಂಗಡ ಘಟಕದ ಅಧ್ಯಕ್ಷ ಎಚ್.ಎ. ನಾಗರಾಜ್, ಮುಖಂಡರುಗಳಾದ ಟಿ.ಆರ್.ಮೋಹನ್, ಮಂಜುನಾಥ್, ಹಸನಬ್ಬ, ಹಮೀದ್ ಇತÀರರು ಇದ್ದರು.