ಕುಶಾಲನಗರ, ಫೆ. 10: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮತ್ತು ಜನಪ್ರತಿನಿಧಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯೆ ಕೆ.ಆರ್. ಮಂಜುಳಾ, ತಾ.ಪಂ. ಸದಸ್ಯೆ ಸಬಿತಾ ಚನ್ನಕೇಶವ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಮತ್ತು ಆಸ್ಪತ್ರೆಯ ಕುಂದುಕೊರತೆಗಳನ್ನು ವಿಚಾರಿಸಿದರು.

ಕುಶಾಲನಗರ ಸರಕಾರಿ ಆಸ್ಪತೆಯಲ್ಲಿ ವೈದ್ಯರ ಕೊರತೆಯೊಂದಿಗೆ ಸಮರ್ಪಕವಾಗಿ ಚಿಕಿತ್ಸೆ ದೊರಕುತ್ತಿಲ್ಲ ಎನ್ನುವ ದೂರುಗಳು ಕೇಳಿಬಂದ ಹಿನ್ನೆಲೆ ಈ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ಸರಕಾರದ ಗಮನಕ್ಕೆ ತರಲಾಗುವದು ಎಂದು ಅಧ್ಯಕ್ಷ ಬಿ.ಎ. ಹರೀಶ್ ಈ ಸಂದರ್ಭ ತಿಳಿಸಿದರು.