ಮಡಿಕೇರಿ, ಫೆ. 10: ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ವತಿಯಿಂದ ಯುನಾನಿ ವೈದ್ಯ ಪದ್ಧತಿಯ ಹೆಸರಾಂತ ವೈದ್ಯ ಹಕೀಂ ಅಜ್ಮಲ್ ಖಾನ್ ಅವರ 150 ನೇ ಜನ್ಮ ದಿನದ ಪ್ರಯುಕ್ತ ಯುನಾನಿ ದಿನಾಚರಣೆಯ ಉದ್ಘಾಟನಾ ಸಮಾರಂಭ ತಾ. 11 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ರಾಮಚಂದ್ರ ತಿಳಿಸಿದ್ದಾರೆ.