ಕೂಡಿಗೆ, ಫೆ. 10: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಜಮಾಬಂದಿ ಕಾರ್ಯಕ್ರಮ ಅಧ್ಯಕ್ಷೆ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು.

2016-17ನೇ ಸಾಲಿನ ಗ್ರಾಮ ಪಂಚಾಯಿತಿಯಲ್ಲಿ ನಡೆದ ಕಾಮಗಾರಿಗಳ ವಿವರ ಹಾಗೂ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿಗಳ ವಿಚಾರಗಳನ್ನು ಮತ್ತು ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ ಮಾಹಿತಿಯನ್ನು ನೀಡಿದರು. ನೋಡಲ್ ಅಧಿಕಾರಿಯಾಗಿ ಆಗಮಿಸಿದ್ದ ಸೋಮವಾರಪೇಟೆ ತಾಲೂಕು ಪಂಚಾಯಿತಿಯ ಸಹಾಯಕ ಕಾಯನಿರ್ವಹಣಾಧಿಕಾರಿ ಸುನೀಲ್ ಕಡತಗಳನ್ನು ಪರಿಶೀಲಿಸಿ, ಕಾಮಗಾರಿ ನಡೆದ ಸ್ಥಳಗಳನ್ನು ಖುದ್ದು ಪರಿಶೀಲಿಸಿದರು. ಈ ಸಂದರ್ಭ ಸಭೆಯಲ್ಲಿ ಉಪಾಧ್ಯಕ್ಷ ಕೆ.ವಿ. ಸಣ್ಣಪ್ಪ, ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.