ಮಡಿಕೇರಿ, ಫೆ. 11: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ತಾ. 12 ರಂದು (ಇಂದು) ಮಧ್ಯಾಹ್ನ 2.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ.