ಒಡೆಯನಪುರ, ಫೆ. 11: ಪತ್ರಕರ್ತರು, ಜನಪ್ರತಿನಿಧಿಗಳು ಸದಾ ಒತ್ತಡದಲ್ಲಿರುವ ನಿಟ್ಟಿನಲ್ಲಿ ಪತ್ರಕರ್ತರ ಮಾನಸಿಕ ಮತ್ತು ಆರೋಗ್ಯ ಅಭಿವೃದ್ದಿಗೆ ಕ್ರೀಡಾಕೂಟ ಸಹಕಾರಿಯಾಗುತ್ತದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯ ಪಟ್ಟರು. ಶನಿವಾರಸಂತೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಭಾರತಿ ವಿದ್ಯಾಸಂಸ್ಥೆಯ ಆಟದ ಮೈದಾನದಲ್ಲಿ ಶನಿವಾರಸಂತೆ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೊಡಗು ಜಿಲ್ಲಾ ಪತ್ರಕರ್ತರ ಟಿನ್ನಿಸ್‍ಬಾಲ್ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಉದ್ಯಮಿ ಹರಪಳ್ಳಿ ರವೀಂದ್ರ ಮಾತನಾಡಿ, ಪತ್ರಕರ್ತರು ಕಠಿಣ ಹಾಗೂ ಕ್ಲಿಷÀ್ಟಕರ ಪರಿಸ್ಥಿತಿಗಳನ್ನು ಎದುರಿಸಿ ಕರ್ತವ್ಯನಿರ್ವಹಿಸುತ್ತಾರೆ, ಪತ್ರಕರ್ತರು ಪ್ರತಿದಿನ ಸುದ್ದಿಯನ್ನು ಬಿತ್ತರಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವ ಜೊತೆಯಲ್ಲಿ ಸಮಾಜದ ಏಳಿಗೆಗೆ, ದೇಶದ ಸರ್ವೋತೋಮುಖ ಬೆಳವಣಿಗೆಗೆ ಪ್ರತೇಕ್ಷವಾಗಿ ಮತ್ತು ಪರೋಕ್ಷ ವಾಗಿಯೂ ಶ್ರಮಿಸುತ್ತಿದ್ದಾರೆ ಎಂದರು.

ರಾಜ್ಯ ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ಜಿ.ಎಸ್.ವಿರೂಪಾಕ್ಷಯ್ಯ ಮಾತನಾಡಿ, ಪತ್ರಕರ್ತರ ಕ್ರಿಯಾಶೀಲತೆಗೆ ಕ್ರೀಡಾ ಚಟುವಟಿಕೆ ಉಪಯೋಗವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷ ಮಹಮದ್‍ಗೌಸ್, ಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಸ್.ಎಂ. ಉಮಾಶಂಕರ್, ಹಂಡ್ಲಿ ಗ್ರಾ.ಪಂ. ಅಧ್ಯಕ್ಷ ಸಂದೀಪ್, ಶನಿವಾರಸಂತೆ ಗ್ರಾ.ಪಂ.ಮಾಜಿ ಅಧ್ಯಕ್ಷ ಎಸ್.ಎನ್. ರಘು ಮಾತನಾಡಿದರು. ಶನಿವಾರಸಂತೆ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್.ಹರೀಶ್ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪತ್ರಕರ್ತರ ಸಂಘದ ರಾಜ್ಯ ಪ್ರತಿನಿಧಿಗಳಾದ ಮರುಳೀಧರ್, ಅನುಕಾರ್ಯಪ್ಪ, ಸೋಮವಾರಪೇಟೆ ಪ್ರೆಸ್ ಕ್ಲಬ್ ಅಧ್ಯಕ್ಷ ಎಸ್.ಮಹೇಶ್, ಗ್ರಾ.ಪಂ.ಕಾರ್ಯದರ್ಶಿ ತಮ್ಮಯ್ಯ ಆಚಾರ್, ಪ್ರಮುಖರಾದ ಪ್ರದೀಪ್ ಮುಂತಾದವರು ಇದ್ದರು.

ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮತ್ತು ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ವಿರೂಪಾಕ್ಷಯ್ಯ ಅವರುಗಳು ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಶನಿವಾರಸಂತೆ ಸರಕಾರಿ ನೌಕರರ ತಂಡ ಮತ್ತು ಜಿಲ್ಲಾ ಪತ್ರಕರ್ತರ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಿತು. ಕೊಡಗು ಜಿಲ್ಲಾ ಪತ್ರಕರ್ತರ ತಂಡಗಳಲ್ಲಿ ವೀರಾಜಪೇಟೆ ಸೌತ್ ಟೈಗರ್ಸ್, ಸೋಮವಾರ ಪೇಟೆಯ ನಾರ್ಥ್ ಲಯನ್ಸ್ ತಂಡ, ಮಡಿಕೇರಿಯ ಮೀಡಿಯಾ ಇಲೆವೆನ್ ಹಾಗೂ ಟೀಮ್ ಕೋಬ್ರ ತಂಡಗಳ ನಡುವೆ ಪಂದ್ಯಾವಳಿ ನಡೆಯಿತು.